ಕೊಡಗು | ಮತಗಟ್ಟೆಗಳಿಗೆ ಡಿ.ಸಿ. ಭೇಟಿ, ಪರಿಶೀಲನೆ

ಕೊಡಗು | ಮತಗಟ್ಟೆಗಳಿಗೆ ಡಿ.ಸಿ. ಭೇಟಿ, ಪರಿಶೀಲನೆ

ಕೊಡಗು | ಮತಗಟ್ಟೆಗಳಿಗೆ ಡಿ.ಸಿ. ಭೇಟಿ, ಪರಿಶೀಲನೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾಲದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನವನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭಾನುವಾರ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮೇಕೇರಿ, ತಾಳತ್ತ್ ಮನೆ, ಕಾಟಕೇರಿ ಹಾಗೂ ಕಡಗದಾಳು ಮತ್ತಿತರ ಗ್ರಾಮಗಳಲ್ಲಿರುವ ಮತಗಟ್ಟೆಗೆ ಅವರು ಭೇಟಿ ನೀಡಿ, ಮಾಹಿತಿ ಪಡೆದರು.

ಅಭಿಯಾನದ ಅಂಗವಾಗಿ ಸೆ.19 ಮತ್ತು 20 ರಂದು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಚಟುವಟಿಕೆಯು ಚುನಾವಣಾ ಆಯೋಗದ ನಿರ್ದೇಶನದಂತೆ ಜರುಗಿದೆ. ಕೊಡಗು ಜಿಲ್ಲೆಯ ಅರ್ಹ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಲ್ಲಿ ಎರಡು ದಿನಗಳ ಕಾಲ ವಿಶೇಷ ಅಭಿಯಾನ ಆಯೋಜಿಸಲಾಗಿತ್ತು ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ನಮೂನೆ–6, ಅನಿವಾಸಿ ಭಾರತೀಯರ ಮತದಾರರ ನೋಂದಣಿಗೆ ನಮೂನೆ–6ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ನಮೂನೆ–7 ಹಾಗೂ ಮತದಾರರ ಪಟ್ಟಿಯಲ್ಲಿನ ವಿವರಗಳ ತಿದ್ದುಪಡಿ, ವಿಳಾಸ ಬದಲಾವಣೆ, ಮತದಾರರ ಗುರುತಿನ ಚೀಟಿ ಸೇರಿದಂತೆ ವಿವಿಧ ಬದಲಾವಣೆಗಳಿಗೆ ನಮೂನೆ–8 ಬಳಸಲು ವಿಶೇಷ ಅಭಿಯಾನದಲ್ಲಿ ಅವಕಾಶ ಮಾಡಲಾಗಿತ್ತು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಸೋಮಶೇಖರ್ ಅವರು ವಿವರಿಸಿದರು.

ಹಾಗೆಯೇ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಳ್ಳುವುದರ ಜೊತೆಗೆ, ಯಾವುದೇ ವ್ಯತ್ಯಾಸ ಇದ್ದಲ್ಲಿ ಅಗತ್ಯ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು ಎಂದರು.

ಮತದಾರರು ಮತದಾರರ ಸಹಾಯವಾಣಿ ಆ್ಯಪ್ ಹಾಗೂ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ voters.eci.gov.in ಮೂಲಕವೂ ಅಗತ್ಯ ಸೇವೆಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ ಎಂದು ಸೋಮಶೇಖರ್ ಅವರು ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ