ಪುತ್ತೂರು: ಕಾರ್ತಿಕ್ ಸುವರ್ಣ ಕೊಲೆ ಪ್ರಕರಣದಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುತ್ತೂರು: ಕಾರ್ತಿಕ್ ಸುವರ್ಣ ಕೊಲೆ ಪ್ರಕರಣದಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುತ್ತೂರು: ಕಾರ್ತಿಕ್ ಸುವರ್ಣ ಕೊಲೆ ಪ್ರಕರಣದಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುತ್ತೂರು: ಸಂಪ್ಯ ಪೊಲೀಸ್ ಠಾಣೆ ಮುಂಭಾಗದ ಸಾರ್ವಜನಿಕ ಗಣೇಶೋತ್ಸವದ ಪೆಂಡಾಲ್‌ನಲ್ಲಿ 7 ವರ್ಷದ ಹಿಂದೆ ನಡೆದಿದ್ದ ಹಿಂದೂ ಜಾಗರಣಾ ವೇದಿಕೆಯ ಮುಖಂಡ, ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಅಪರಾಧಿಗಳಿಗೆ ಪುತ್ತೂರಿನ 5ನೇ ಹೆಚ್ಚು ವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ಹಾಗೂ ತಲಾ ₹3ಲಕ್ಷ ದಂಡ ವಿಧಿಸಿದೆ.

ದಂಡದ ಮೊತ್ತದಲ್ಲಿ ₹5.90ಲಕ್ಷ ವನ್ನು ಕಾರ್ತಿಕ್ ತಾಯಿ ಹೇಮಾವತಿ ಅವರಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ, ಉಪ್ಪಳ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಪ್ರೀತು ಯಾನೆ ಪ್ರೀತೇಶ್ ಸುಲಾಯ ಮತ್ತು ಸಂಪ್ಯ ಠಾಣೆ ಹಿಂಭಾಗದ ನಿವಾಸಿ ಕಿರಣ್ ರೈ ಯಾನೆ ಮಣಿ ಶಿಕ್ಷೆಗೊಳಗಾದವರು. ಸಾಕ್ಷ್ಯಾಧಾರಗಳಿಂದ ಅವರಿಬ್ಬರ ಮೇಲಿನ ಆರೋಪ ಸಾಬೀತಾಗಿದೆ ಎಂದು ಸೋಮವಾರ ತೀರ್ಮಾನಿಸಿದ್ದ ಪುತ್ತೂ ರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಮಂಗಳವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.

ಮತ್ತೊಬ್ಬ ಆರೋಪಿ ಮಂಗಳೂರಿನ ಅತ್ತಾವರದ ಸಂತು ಯಾನೆ ಸ್ಟೀವನ್ ಮೊಂತೆರೊ ಮೇಲಿನ ಆರೋಪ ಸಾಬೀತಾಗದ ಕಾರಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಯಾಗಿದ್ದ ಆಗಿನ ಸಿಪಿಐ ನಾಗೇಶ್ ಕದ್ರಿ ಅವರು ಸಾಕ್ಷಿ ಕಲೆಹಾಕಿ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಜಯಂತಿ ಸತೀಶ್ ಭಟ್ ವಾದ ಮಂಡಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ