ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾ: ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾ: ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾ: ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು: ಕಲಬುರಗಿ ಜೇವರ್ಗಿ ತಾಲ್ಲೂಕಿನ ಇಟ್ಟನಹಳ್ಳಿ ಗ್ರಾಮದ ರೈತರು ಬೆಳೆ ವಿಮೆಗೆ ಪಾವತಿಸಿದ್ದ ಹಣವನ್ನು ಡಿಸಿಸಿ ಬ್ಯಾಂಕಿಗೆ ಪಾವತಿ ಮಾಡದ ಕಾರಣ 93 ರೈತರ ವಿಮೆ ತಿರಸ್ಕಾರಗೊಂಡಿದ್ದು, ಈ ವಿಚಾರದಲ್ಲಿ ನಿರ್ಲಕ್ಷ ತೋರಿರುವ ಸ್ವಸಹಾಯ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು ಸಿಎಂ ಸೂಚನೆ ನೀಡಿದರು.

ಮಂಗಳವಾರ ಬೆಳಗ್ಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಶಿವಕುಮಾರ್ ಅವರು ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ, ಅವರ ಸಮಸ್ಯೆ ಆಲಿಸಿದರು.

ಇಟ್ಟನಹಳ್ಳಿ ಗ್ರಾಮದ ರೈತ ಸಿಎಂ ಅವರನ್ನು ಭೇಟಿ ಮಾಡಿ ನಾವು ಬೆಳೆ ವಿಮೆಗೆ ಸ್ವ ಸಹಾಯ ಸೊಸೈಟಿಗೆ ಹಣ ಕಟ್ಟಿದ್ದು, ಅವರು ಡಿಸಿಸಿ ಬ್ಯಾಂಕಿಗೆ ಹಣ ಪಾವತಿ ಮಾಡದ ಕಾರಣ ನಮ್ಮ ವಿಮೆ ತಿರಸ್ಕೃತಗೊಂಡಿದೆ ಎಂದು ನಮಗೆ ಮೆಸೇಜ್ ಬಂದಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ರೈತರು ಹಣ ಪಾವತಿ ಮಾಡಿರುವ ಪಟ್ಟಿ ಪರಿಶೀಲಿಸಿದ ಸಿಎಂ, ಕೂಡಲೇ ನಿರ್ಲಕ್ಷ ತೋರಿರುವ ಅಧಿಕಾರಿಯನ್ನು ವಜಾಗೊಳಿಸುವಂತೆ ಸೂಚನೆ ನೀಡಿದರು.

ಬೆಳೆ ವಿಮೆ ಸಿಕ್ಕಿಲ್ಲ ಎಂದು ಅಳಲು

ಬೆಳೆಗೆ ವಿಮೆ ಮಾಡಿಸುವುದಿಲ್ಲವೇ ಎಂದು ಸಿಎಂ ಯಶವಂತಪುರ ಎಪಿಎಂಸಿಯಲ್ಲಿ ಕೇಳಿದಾಗ, ನಾವು ಹೆಕ್ಟೆರ್ ಗೆ ₹6,500 ವಿಮೆ ಕಟ್ಟಿದ್ದರೂ ನಮಗೆ ಏನೂ ಸಿಕ್ಕಿಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೈತ ತಮ್ಮ ನೋವು ತೋಡಿಕೊಂಡರು. ರೈತರ ಮಾಹಿತಿ ಪಡೆಯುವಂತೆ ಸಿಎಂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಖುದ್ದಾಗಿ ತೂಕ ಪರಿಶೀಲನೆ

ನೀವು ಈರುಳ್ಳಿ ತರಬೇಕಾದರೆ ಪೊಲೀಸರು ತಡೆದು ಹಣ ಪಡೆಯುತ್ತಾರಾ? ರೈತರಿಗೆ ಸರಿಯಾದ ಸಮಯಕ್ಕೆ ಹಣ ನೀಡುತ್ತಾರೆಯೇ? ರೈತರಿಂದ ಮಾರುಕಟ್ಟೆಯವರು ಕಮಿಷನ್ ಏನಾದರೂ ಪಡೆಯುತ್ತಾರಾ? ಪ್ರತಿ ಎಕರೆಗೆ ಎಷ್ಟು ಖರ್ಚು ಆಗುತ್ತದೆ? ನಿಮ್ಮ ಬೆಳೆಯ ತೂಕ ಸರಿಯಾಗಿ ಮಾಡುತ್ತಿದ್ದಾರಾ? ಎಂದು ರೈತರನ್ನು ವಿಚಾರಿಸಿ, ಮಾಹಿತಿ ಪಡೆದರು. ತಾವೇ ಖುದ್ದಾಗಿ ಈರುಳ್ಳಿ ತೂಕವನ್ನು ಪರಿಶೀಲನೆ ನಡೆಸಿದರು.

ಕಲಬುರಗಿ, ಬೀದರ್, ವಿಜಯಪುರ ಮಾರುಕಟ್ಟೆಯಲ್ಲಿ ₹ 8 ರಿಂದ ₹10 ಕಮಿಷನ್ ಪಡೆಯುತ್ತಾರೆ. ಯಶವಂತಪುರ ಮಾರುಕಟ್ಟೆಯಲ್ಲಿ ರೈತರಿಂದ ಕಮಿಷನ್ ಪಡೆಯುವುದಿಲ್ಲ. ಹೀಗಾಗಿ ನಾವು ಇಲ್ಲಿಗೆ ತಂದು ಹಾಕುತ್ತೇವೆ ಎಂದು ರೈತರು ಮಾಹಿತಿ ನೀಡಿದರು.

ಈ ಬಾರಿ ಮಳೆ ಕೊರತೆಯಿಂದಾಗಿ ಇಳುವರಿ ಕಡಿಮೆಯಾಗಿದೆ. ಎಕರೆಗೆ 150-200 ಪ್ಯಾಕೆಟ್ ಈರುಳ್ಳಿ ಬರುತ್ತದೆ. ಆದರೆ ಈ ಬಾರಿ ಕೇವಲ 50 ಪ್ಯಾಕೆಟ್ ಮಾತ್ರ ಸಿಕ್ಕಿದೆ ಎಂದು ವಿವರಿಸಿದರು. ಮಳೆ ಹೆಚ್ಚಾದರೆ ಈರುಳ್ಳಿ ಜಮೀನಿನಲ್ಲೇ ಕೊಳೆಯುತ್ತದೆ. ಆಗ ಸರಿಯಾದ ಬೆಲೆ ಸಿಗುವುದಿಲ್ಲ. ಅದನ್ನು ಮಾರುಕಟ್ಟೆಗೆ ತಂದು ಹಾಕಲು ಆಗುವ ಖರ್ಚಿನಷ್ಟು ಹಣ ಸಿಗುವುದಿಲ್ಲ ಎಂದು ರೈತರು ವಿವರಿಸಿದರು.

ಹೆಚ್ಚು ಹಣ ಪಡೆದರೆ ಹೇಳಿ ಮಟ್ಟ ಹಾಕುವೆ

ಮಾರುಕಟ್ಟೆಯಲ್ಲಿನ ಮಂಡಿ ವರ್ತಕರೊಂದಿಗೆ ಮಾತುಕತೆ ನಡೆಸಿದ ಸಿಎಂ, ನೀವು ಎಪಿಎಂಸಿಗೆ ಎಷ್ಟು ಪಾವತಿ ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ವರ್ತಕರು ₹100 ಗೆ 60 ಪೈಸೆ ಪಾವತಿ ಮಾಡುತ್ತೇವೆ ಎಂದರು. ಬೇರೆ ವರ್ತಕ ₹1 ಪಾವತಿ ಮಾಡುತ್ತಿರುವುದಾಗಿ ತಿಳಿಸಿದರು. ಆ ರೀತಿ ಏನಾದರೂ ಹೆಚ್ಚು ಹಣ ಪಡೆದರೆ ನನಗೆ ಹೇಳಿ ಅವರನ್ನು ನಾನು ಮಟ್ಟ ಹಾಕುತ್ತೇನೆ ಎಂದು ಹೇಳಿದರು.

ರೈತರಿಂದ ನೇರ ಖರೀದಿ ವೇಳೆ ತೂಕ ಮೋಸ ಆಗದಂತೆ ಕ್ರಮ

ಕೆಲವರು ಎಪಿಎಂಸಿ ಮಾರುಕಟ್ಟೆಗೆ ಬರುವುದಿಲ್ಲ ನೇರವಾಗಿ ರೈತರಿಂದ ಖರೀದಿ ಮಾಡುತ್ತಾರೆ. ಅಲ್ಲಿ ಒಂದು ಬೆಲೆ ನಿಗದಿ ಮಾಡಿ ತೂಕ ಹೆಚ್ಚು ಕಮ್ಮಿ ಮಾಡಿ ತೆಗೆದುಕೊಂಡು ಹೋಗುತ್ತಾರೆ ಎಂದು ಹೇಳಿದರು. ಆಗ ಸಿಎಂ, ಈ ರೀತಿ ರೈತರಿಂದ ನೇರವಾಗಿ ಖರೀದಿ ಮಾಡುವವರು ತೂಕದಲ್ಲಿ ಹೆಚ್ಚು ಕಮ್ಮಿ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ