
ಶಿಕ್ಷಕರ ದಿನಾಚರಣೆಗೆ ಪ್ರಧಾನಿ ಮೋದಿ ಸೇರಿ ಹಲವರಿಂದ ಶುಭಾಶಯ
ಶಿಕ್ಷಕರ ದಿನಾಚರಣೆಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರು ಶುಭಕೋರಿದ್ದಾರೆ.
ಮೋದಿ ಅವರು ದೆಹಲಿಯಲ್ಲಿ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ವಿತರಿಸಿ ಶಿಕ್ಷಕರ ದಿನಾಚರಣೆಗೆ ಶುಭಕೋರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಶಿಕ್ಷಕರು ನಮ್ಮ ಸಮಾಜಕ್ಕೆ ನೀಡಿದ ಅಪಾರ ಕೊಡುಗೆಯನ್ನು ಶ್ಲಾಘಿಸುವ ದಿನವಾಗಿದೆ. ಡಾ. ಎಸ್. ರಾಧಾಕೃಷ್ಣನ್ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ದಿನವಾಗಿದೆ’ ಎಂದಿದ್ದಾರೆ.
‘ಸಮಾಜದ ಭವಿಷ್ಯವನ್ನು ರೂಪಿಸುವ ರೂವಾರಿಗಳಾದ ನಾಡಿನ ಸಮಸ್ತ ಶಿಕ್ಷಕ ವೃಂದ. ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನದ ಜ್ಯೋತಿಯನ್ನು ಬೆಳಗುವ ನಿಸ್ವಾರ್ಥ ಸೇವೆಗೆ ಹಾಗೂ ಶಿಕ್ಷಣವೇ ರಾಷ್ಟ್ರದ ಪ್ರಗತಿಗೆ ಬುನಾದಿ ಎಂದು ನಂಬಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳಿಗೆ ಅನಂತ ನಮನಗಳು. ಸುಶಿಕ್ಷಿತ ಸಮಾಜ ನಿರ್ಮಾಣಕ್ಕಾಗಿ ದುಡಿಯುತ್ತಿರುವ ಪ್ರತಿಯೊಬ್ಬ ಗುರುವಿಗೂ ನಾವೆಲ್ಲರೂ ಸದಾ ಗೌರವ ಸಲ್ಲಿಸೋಣ’ ಎನ್ನುವ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಿಕ್ಷಕರ ದಿನಾಚರಣೆಗೆ ಶುಭಕೋರಿದ್ದಾರೆ.
ಶಿಕ್ಷಣವನ್ನು ಪರಿವರ್ತಕ ಶಕ್ತಿ. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖ ಎಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ನಂಬಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಯುವ ಪೀಳಿಗೆಗೆ ಶಿಕ್ಷಣದ ಮೂಲಕ ಮಾರ್ಗದರ್ಶನ, ಪ್ರೋತ್ಸಾಹ ನೀಡುವ ಪ್ರತಿಯೊಬ್ಬ ಶಿಕ್ಷಕರಿಗೂ ಕೃತಜ್ಞತೆಯನ್ನು ತಿಳಿಸುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿಕ್ಷಕರಿಗೆ ನಮನ ಸಲ್ಲಿಸಿ ಪೋಸ್ಟ್ ಹಂಚಿಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಡಾ. ಎಸ್. ರಾಧಾಕೃಷ್ಣನ್ ಅವರ ಶಿಕ್ಷಣಕ್ಕೆ ನೀಡಿದ ಕೊಡುಗೆ ಸ್ಪೂರ್ತಿದಾಯಕ. ದೇಶದ ಭವಿಷ್ಯಕ್ಕಾಗಿ ಅಡಿಪಾಯವನ್ನು ನಿರ್ಮಿಸುವ ಪ್ರತಿಯೊಬ್ಬ ಶಿಕ್ಷಕರಿಗೂ ನಮನಗಳು’ ಎಂದಿದ್ದಾರೆ.