ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧನೆ ಮಾಡಿ: ಸಚಿವ ಕೃಷ್ಣಬೈರೇಗೌಡ

ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧನೆ ಮಾಡಿ: ಸಚಿವ ಕೃಷ್ಣಬೈರೇಗೌಡ

ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧನೆ ಮಾಡಿ: ಸಚಿವ ಕೃಷ್ಣಬೈರೇಗೌಡ

ಯಲಹಂಕ: ‘ಆಸಕ್ತಿ ಮತ್ತು ಅಭಿರುಚಿಯ ಕ್ಷೇತ್ರದಲ್ಲಿ ಪರಿಶ್ರಮಪಟ್ಟರೆ ಯಶಸ್ಸು ಖಚಿತ’ ಎಂದು ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಬ್ಯಾಟರಾಯನಪುರದಲ್ಲಿರುವ ಮಾಲ್‌ ಆಫ್‌ ಏಷ್ಯಾ ಆವರಣದಲ್ಲಿ ಕೆಬಿಜಿ ಸ್ವಯಂಸೇವಕರು ಹಾಗೂ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಆಶ್ರಯದಲ್ಲಿ ಆಯೋಜಿಸಿದ್ದ ‘ನಮ್ಮ ಯಂಗ್‌ಸ್ಟರ್ಸ್‌–ಗ್ರ್ಯಾಂಡ್‌ ಫಿನಾಲೆ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಯುವಜನರಲ್ಲಿ ಅಡಗಿರುವ ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿವರ್ಷ ‘ನಮ್ಮ ಯಂಗ್‌ಸ್ಟರ್ಸ್‌’ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ’ ಎಂದರು.

‘ಕ್ಷೇತ್ರದಲ್ಲಿ ಕ್ರೀಡೆ, ಸಾಂಸ್ಕೃತಿಕ, ಶಿಕ್ಷಣ, ಪರಿಸರ, ಹಬ್ಬಗಳು ಹಾಗೂ ಮ್ಯಾರಥಾನ್‌ ಸೇರಿ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ’ ಎಂದರು.

ಬಹುಮಾನ: ಸೋಲೋ ನೃತ್ಯ ವಿಭಾಗದ ಮೊದಲ ಮೂರು ಸ್ಥಾನಗಳನ್ನು ಜಾನ್ವಿ, ಹಿಮೇಶ್‌ (ಸಂಗೀತ) ಹಾಗೂ ದಿಯಾ (ನೃತ್ಯ) ಗಳಿಸಿದರು. ಸಮೂಹ ನೃತ್ಯ ವಿಭಾಗದಲ್ಲಿ ಬಿಂದಿಯಾ ಮತ್ತು ತಂಡ, ಟೀಮ್‌ ಡ್ಯಾನ್ಸಿಂಗ್‌ ಬುಲ್‌ ಹಾಗೂ ಹಸ್ಟಲ್‌ ಡ್ಯಾನ್ಸ್‌ ಸ್ಟುಡಿಯೋ ತಂಡಗಳು ಮೊದಲ ಮೂರು ‌ಸ್ಥಾನ ಗಳಿಸಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260902-4-922976606

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ