ಸುರ್ಜೇವಾಲಾ ಭೇಟಿಯಾದ ರಾಜಣ್ಣ

ಸುರ್ಜೇವಾಲಾ ಭೇಟಿಯಾದ ರಾಜಣ್ಣ

ಸುರ್ಜೇವಾಲಾ ಭೇಟಿಯಾದ ರಾಜಣ್ಣ

ನವದೆಹಲಿ: ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ, ಶಾಸಕ ಕೆ.ಎನ್‌.ರಾಜಣ್ಣ ಅವರು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಸೋಮವಾರ ಇಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು.

ಇದೇ 10ರಂದು ಚುನಾವಣೆ ನಡೆಯಲಿದೆ. ಮತ್ತೊಂದು ಅವಧಿಗೆ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಲು ರಾಜಣ್ಣ ಉತ್ಸುಕರಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮೇಲೆ ಹೈಕಮಾಂಡ್‌ ನಾಯಕರಿಂದ ಒತ್ತಡ ತರಲು ಪ್ರಯತ್ನ ನಡೆಸಿದ್ದಾರೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್‌ ಅವರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ.

ಅಧ್ಯಕ್ಷ ಗಾದಿ ಮೇಲೆ ಶಾಸಕರಾದ ಶಿವಾನಂದ ಪಾಟೀಲ, ಶಿವರಾಂ ಹೆಬ್ಬಾರ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಬಿಜೆಪಿ ಮುಖಂಡ ಬೆಳ್ಳಿ ಪ್ರಕಾಶ್‌ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ