
ಗದಗ| ರಸ್ತೆ ನಿರ್ಮಾಣ ಸಂದರ್ಭದಲ್ಲಿ ಮರಗಳ ರಕ್ಷಣೆಗೆ ಕ್ರಮ: ಮಿಥುನ ಪಾಟೀಲ
ಮರಗರೋಣ: ರಸ್ತೆ ನಿರ್ಮಾಣ ಸಂದರ್ಭದಲ್ಲಿ ಪಟ್ಟಣದ ರಸ್ತೆ ಪಕ್ಕದ ಮರಗಳ ಮಾರಣ ಹೋಮ ನಡೆಸದೆ ಅವುಗಳನ್ನು ರಕ್ಷಿಸಿ ನಿರ್ವಹಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಹೇಳಿದರು.
ಪಟ್ಟಣದ ಜಕ್ಕಲಿ ರಸ್ತೆಯಲ್ಲಿ ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಹೆಸರಿನಲ್ಲಿ ಮರಗಳ ಮಾರಣ ಹೋಮ ನಡೆಸದೆ ಸಾಧ್ಯವಾದಷ್ಟು ಮಟ್ಟಿಗೆ ಅವುಗಳನ್ನು ಉಳಿಸುವ ಕಾರ್ಯ ಆಗಬೇಕಾಗಿದೆ ಎಂದರು.
ಯಲ್ಲಪ್ಪ ಕಿರೇಸೂರ, ಬಾವಸಾಬ್ ಬೆಟಗೇರಿ,ಮಲ್ಲಿಕ್ ಯಲಿಗಾರ, ಅಸ್ಲಾಂ ಕೊಪ್ಪಳ, ಅಶೋಕ್ ಗಡಗಿ, ಪುರಸಭೆ ಮುಖ್ಯಾಧಿಕಾರಿ ರಮೇಶ ಹೊಸಮನಿ, ಅನ್ವರ್ ಕೋಲಕಾರ ಇದ್ದರು.