
ಸಚಿವರಾದ ಶರಣಪ್ರಕಾಶ ಪಾಟೀಲ, ಯು.ಟಿ. ಖಾದರ್ ಜಿಲ್ಲಾ ಪ್ರವಾಸ ಇಂದು
ಗದಗ: ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ–ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ ಪಾಟೀಲ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಫರೀದ್ ಅವರು ಸೆಪ್ಟೆಂಬರ್ 13ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಯು.ಟಿ. ಖಾದರ್ ಅವರು ಬೆಳಿಗ್ಗೆ 9 ಗಂಟೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲೆ, ಹಾಸ್ಟೆಲ್ ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡುವರು. ಇಬ್ಬರೂ ಸಚಿವರು ಬೆಳಿಗ್ಗೆ 10 ಗಂಟೆಗ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯ ಆಸ್ಪತ್ರೆಯ ವಿವಿಧ ವಿಭಾಗಗಳ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸೌರ ವಿದ್ಯುತ್ ಉತ್ಪಾದನಾ ಘಟಕ, ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡ ಉದ್ಘಾಟನೆ ನೆರವೇರಿಸುವರು. ಬೆಳಿಗ್ಗೆ 11 ಗಂಟೆಗೆ ಆಸ್ಪತ್ರೆಯ ಸಭಾಂಗಣದಲ್ಲಿ ಐಎಂಎ ವತಿಯಿಂದ ಆಯೋಜಿಸಿರುವ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸುವರು.
ಯು.ಟಿ. ಖಾದರ್ ಅವರು ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಪ್ರಗತಿ ಪರಿಶೀಲನೆ, 1 ಗಂಟೆಗೆ ಅಲ್ಪಸಂಖ್ಯಾತರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.