ಸೋಮವಾರಪೇಟೆ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ನಿರ್ಣಯ

ಸೋಮವಾರಪೇಟೆ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ನಿರ್ಣಯ

ಸೋಮವಾರಪೇಟೆ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ನಿರ್ಣಯ

ಸೋಮವಾರಪೇಟೆ: ತಾಲ್ಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಚೆಗೆ ನಡೆದ ವಿಶೇಷ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಕಸ್ತೂರಿರಂಗನ್ ವರದಿ ಶಿಫಾರಸುಗಳ ಅನುಷ್ಠಾನ ಸಂಪೂರ್ಣ ತಿರಸ್ಕರಿಸುವಂತೆ ನಿರ್ಣಯ ಕೈಗೊಳ್ಳಲಾಯಿತು.

ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಡಳಿತಾಧಿಕಾರಿ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು.

ರೈತ ಸಂಘದ ಅಧ್ಯಕ್ಷ ಕೆ.ಎಂ. ದಿನೇಶ್ ಮಾತನಾಡಿ, ‘ವರದಿ ಅನುಷ್ಠಾನದಿಂದ ಕುದುರೆಮುಖದಲ್ಲಿ ನಡೆದ ರೀತಿ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಪರಿಸ್ಥಿತಿ ನಿರ್ಮಾಣ ಆಗಬಹುದು. ನಮ್ಮ ಜಾಗವನ್ನು ಉಳಿಸಿಕೊಳ್ಳಲು ನಾವೇ ಹೋರಾಟ ಮಾಡಬೇಕಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸುವ ಕುರಿತು ಚಿಂತಿಸಬೇಕಾಗುತ್ತದೆ. ಸರ್ಕಾರ ರೈತರನ್ನು ಉಳಿಸಬೇಕು. ರೈತರೇ ಇಲ್ಲದಿದ್ದರೆ ಆಹಾರ ಉತ್ಪಾದನೆ ಸಾಧ್ಯವಿಲ್ಲ’ ಎಂದರು.

ತೋಳೂರುಶೆಟ್ಟಳ್ಳಿ ಶಿವಕುಮಾರ್, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳುಗ್ರಾಮಗಳಿಗೆ ಬಂದು ರೈತರ ಸಮಸ್ಯೆ ಆಲಿಸಬೇಕು ಎಂದು ಒತ್ತಾಯಿಸಿದರು.

ಕೂತಿ ಗ್ರಾಮದ ಕೆ.ಯು. ಜಗದೀಶ್, ಮುಖ್ಯಮಂತ್ರಿ ವಿಶೇಷ ಕಾಳಜಿ ವಹಿಸಿ ಕಸ್ತೂರಿರಂಗನ್ ವರದಿಯನ್ನು ವಿರೋಧಿಸುವ ನಿಟ್ಟಿನಲ್ಲಿ ವಿಶೇಷ ಅಧಿವೇಶನದಲ್ಲಿ ರೈತರ ಪರ ಸರ್ಕಾರ ನಿಂತಿದೆ. ಈ ಹಿಂದೆ ಸುತ್ತಲಿನ ಗ್ರಾಮಗಳು ವರದಿ ವ್ಯಾಪ್ತಿಯಲ್ಲಿದ್ದರೂ ಇದೀಗ ನಮ್ಮ ಗ್ರಾಮಗಳನ್ನೂ ಸೇರಿಸಲಾಗಿದೆ. ಸಮೀಕ್ಷೆ ನಡೆಸಿ ವರದಿ ತಿರಸ್ಕರಿಸಬೇಕು ಎಂದರು.

ಕಸ್ತೂರಿರಂಗನ್ ವರದಿ ತಿರಸ್ಕರಿಸಿ, ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ನಿರ್ಣಯ ಅಂಗೀಕರಿಸಿ, ಸರ್ಕಾರಕ್ಕೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ನೋಡಲ್ ಅಧಿಕಾರಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಿ.ವಿ. ಶ್ರೀನಿವಾಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ