ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ನಾಳೆ ವಿಧಾನಸೌಧ ಚಲೋ

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ನಾಳೆ ವಿಧಾನಸೌಧ ಚಲೋ

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ನಾಳೆ ವಿಧಾನಸೌಧ ಚಲೋ

ಕೋಲಾರ: ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ಸೆ.8ರಂದು ಬೃಹತ್ ವಿಧಾನಸೌಧ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ ತಿಳಿಸಿದ್ದಾರೆ.

ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸದೆ ರಾಜ್ಯದಲ್ಲಿ ದುಡಿಯುತ್ತಿರುವ ಸುಮಾರು 1.80 ಕೋಟಿ ಕಾರ್ಮಿಕರಿಗೆ ರಾಜ್ಯ ಸರ್ಕಾರ ದ್ರೋಹ ಎಸಗಿದೆ. ಕೈಗಾರಿಕಾ ಮಾಲೀಕರ ಒತ್ತಡಕ್ಕೆ ಮಣಿದು ಕನಿಷ್ಠ ವೇತನ ಜಾರಿ ಪರಿಶೀಲನೆಗೆ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಖಂಡನೀಯ. ಪರಿಷ್ಕೃತ ಕನಿಷ್ಠ ವೇತನವನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

2017ರ ಬಳಿಕ ಸುಮಾರು ಒಂಬತ್ತು ವರ್ಷಗಳ ನಂತರ ಕನಿಷ್ಠ ವೇತನ ಪರಿಷ್ಕರಣೆಗೊಂಡಿದ್ದು, ದಶಕದ ಬೆಲೆ ಏರಿಕೆಗೆ ಹೋಲಿಸಿದರೆ ಹೆಚ್ಚಳ ಸಮರ್ಪಕವಾಗಿಲ್ಲ. ಬೀಡಿ, ಪ್ಲಾಂಟೇಷನ್, ಕೈಮಗ್ಗ, ಗಾರ್ಮೆಂಟ್ಸ್ ಸೇರಿದಂತೆ 19 ಕೈಗಾರಿಕೆಗಳಿಗೆ ಅಧಿಸೂಚನೆ ಅನ್ವಯಿಸದಿರುವುದು ಕಾರ್ಮಿಕರಿಗೆ ಅನ್ಯಾಯವಾಗಿದೆ ಎಂದು ದೂರಿದ್ದಾರೆ.

ಅಂಗನವಾಡಿ, ಅಕ್ಷರದಾಸೋಹ ಹಾಗೂ ಆಶಾ ನೌಕರರನ್ನು ಕನಿಷ್ಠ ವೇತನದ ವ್ಯಾಪ್ತಿಗೆ ತರಬೇಕು. ಅಸಂಘಟಿತ ಕ್ಷೇತ್ರದಲ್ಲಿ ದುಡಿಯುತ್ತಿರುವ ಕೋಟ್ಯಂತರ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಒದಗಿಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ಸೌಲಭ್ಯಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು. ಗಿಗ್ ಕಾರ್ಮಿಕರು, ಹಮಾಲರು, ಬೀದಿಬದಿ ವ್ಯಾಪಾರಿಗಳು, ನೇಕಾರರು, ಮನೆಗೆಲಸದವರು ಸೇರಿದಂತೆ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ