ಕಲಬುರಗಿ ಜೈಲಿನಲ್ಲಿ ಕೈದಿಗಳ ಐಷಾರಾಮಿ ಬದುಕು: ಮುಖ್ಯ ಅಧೀಕ್ಷಕಿ ಅನಿತಾ ಅಮಾನತು

ಕಲಬುರಗಿ ಜೈಲಿನಲ್ಲಿ ಕೈದಿಗಳ ಐಷಾರಾಮಿ ಬದುಕು: ಮುಖ್ಯ ಅಧೀಕ್ಷಕಿ ಅನಿತಾ ಅಮಾನತು

ಕಲಬುರಗಿ ಜೈಲಿನಲ್ಲಿ ಕೈದಿಗಳ ಐಷಾರಾಮಿ ಬದುಕು: ಮುಖ್ಯ ಅಧೀಕ್ಷಕಿ ಅನಿತಾ ಅಮಾನತು

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ‌ಐಷಾರಾಮಿ ಸೌಲಭ್ಯಗಳು ದೊರೆತ ‌ಪ್ರಕರಣದಲ್ಲಿ‌ ಕರ್ತವ್ಯ ಲೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಜೈಲಿನ ಮುಖ್ಯ ಅಧೀಕ್ಷಕಿಯಾಗಿದ್ದ ಆರ್.ಅನಿತಾ‌ ಅವರನ್ನು ಅಮಾನತುಗೊಳಿಸಿ ಕಾರಾಗೃಹ ಮತ್ತು ಸುಧಾರಣೆ ‌ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಕುಮಾರ್ ಆದೇಶಿಸಿದ್ದಾರೆ.

ಅಲ್ಲದೇ,‌ ಅವರ ಹುದ್ದೆಯ ಹಕ್ಕನ್ನು ವಿಜಯಪುರದ ನೂತನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ‌‌. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ‌ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ‌ ಎಂದೂ ಆದೇಶದಲ್ಲಿ‌ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ ‌ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ವಿವಿಧ ಬ್ರ್ಯಾಂಡ್‌ಗಳ ಮದ್ಯ ಇಟ್ಟುಕೊಂಡು ಇಸ್ಪೀಟ್ ಜೂಜಾಟ ಆಡುತ್ತಿದ್ದ ದೃಶ್ಯಗಳು ಸಾಮಾಜಿಕ ‌ಜಾಲತಾಣಗಳಲ್ಲಿ ಹರಿದಾಡಿದ್ದವು. ಇದಕ್ಕೆ ವ್ಯಾಪಕ ಟೀಕೆಗಳು‌‌ ವ್ಯಕ್ತವಾಗಿದ್ದವು.

ಈ‌ ಕುರಿತು ಕಾರಾಗೃಹ ಇಲಾಖೆಯ ಉನ್ನತ ಅಧಿಕಾರಿಗಳ ತಂಡವು ಜೈಲಿಗೆ ಭೇಟಿ ನೀಡಿ ತನಿಖೆಯನ್ನೂ ನಡೆಸಿತ್ತು. ಬಳಿಕ ಆರ್. ಅನಿತಾ ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರಿನ ಕಾರಾಗೃಹ ‌ತರಬೇತಿ ಸಂಸ್ಥೆಗೆ ನಿಯೋಜಿಸಿ ಆದೇಶಿಸಲಾಗಿತ್ತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ