
ಸಂಪಾಜೆ: ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪನೆಗೆ ಭೂಮಿಪೂಜೆ
ನಾಪೋಕ್ಲು: ಸಮೀಪದ ಸಂಪಾಜೆಯಲ್ಲಿ ₹20 ಕೋಟಿ ವೆಚ್ಚದಲ್ಲಿ ನೂತನ 33/11 ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪನೆಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ಸಂಪಾಜೆ, ಚೆಂಬು ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ಪೂರೈಕೆ, ವೋಲ್ಟೇಜ್ ಸಮಸ್ಯೆ ಹಾಗೂ ವಿದ್ಯುತ್ ಮೂಲಸೌಕರ್ಯ ಹೆಚ್ಚಳವು ಈ ಕಾಮಗಾರಿಯಿಂದ ಸಾಧ್ಯವಾಗಲಿದೆ. ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಇಲ್ಲಿ ಸ್ಥಾಪಿಸುವ ಲಘು ಉದ್ಯಮಗಳಿಗೂ ಇದು ಸಹಕಾರಿಯಾಗಲಿದೆ ಎಂದರು.
ಪಂಚಾಯಿತಿ ಮಾಜಿ ಅಧ್ಯಕ್ಷ ರಮಾದೇವಿ ಕಳಗಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೌಕತ್ ಆಲಿ, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕನ್ಯಾನ, ಮಾಜಿ ಅಧ್ಯಕ್ಷ ಇಸ್ಮಾಯಿಲ್, ಪ್ರಮುಖರಾದ ಸೂರಜ್ ಹೊಸೂರು, ಕೊಲ್ಯದ ಗಿರೀಶ್ ಉಪಸ್ಥಿತರಿದ್ದರು.