ಗೋಣಿಕೊಪ್ಪಲು: ಕೆ.ಬಾಡಗ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಎ.ಎಸ್.ಪೊನ್ನಣ್ಣ

ಗೋಣಿಕೊಪ್ಪಲು: ಕೆ.ಬಾಡಗ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಎ.ಎಸ್.ಪೊನ್ನಣ್ಣ

ಗೋಣಿಕೊಪ್ಪಲು: ಕೆ.ಬಾಡಗ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಎ.ಎಸ್.ಪೊನ್ನಣ್ಣ

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕು ಕೆ.ಬಾಡಗ ಗ್ರಾಮ ಪಂಚಾಯಿತಿಯ ಆಡಳಿತ ಕಚೇರಿ ಮತ್ತು ಸಭಾಂಗಣವನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

2014ರಲ್ಲಿಯೇ ಪಂಚಾಯಿತಿ ಅಸ್ತಿತ್ವಕ್ಕೆ ಬಂದಿದ್ದರೂ ಸ್ವಂತ ಕಟ್ಟಡ ಹೊಂದಿರಲಿಲ್ಲ. ₹18.11 ಲಕ್ಷ ಅನುದಾನದಲ್ಲಿ ನೂತನ ಆಡಳಿತ ಕಚೇರಿ ಕಟ್ಟಡ ನಿರ್ಮಿಸಿಕೊಡಲಾಗಿದೆ.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿದರು.

ಕೊಡವ ಸಮಾಜಗಳ ಒಕ್ಕೂಟ ಸಮಿತಿ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಪಂಚಾಯಿತಿ ಉಪಾಧ್ಯಕ್ಷ ಚೆಪ್ಪುಡಿರ ಡಿ.ಬೋಪಣ್ಣ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ತಾ. ಪಂ. ಇಒ ರಾಜೇಶ್ ಆರ್.ಕೆ., ಪಂಚಾಯಿತಿ ಮಾಜಿ ಅಧ್ಯಕ್ಷ ಮುಕ್ಕಾಟಿರ ಬಿದ್ದಪ್ಪ, ಕೆ. ಬಾಡಗ ಮಹಿಳಾ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷೆ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ, ಪಿಡಿಒ ಅರುಣ್ ಭಾಸ್ಕರ್, ಕಾರ್ಯದರ್ಶಿ ಕಾಳಪ್ಪ ಕೆ.ಡಿ, ಸಹ ಶಿಕ್ಷಕಿ ಸೌಮ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260901-51-59781681

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ