ಬರ ಅಧ್ಯಯನ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಇಲ್ಲ: ಆಕ್ರೋಶ

ಬರ ಅಧ್ಯಯನ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಇಲ್ಲ: ಆಕ್ರೋಶ

ಬರ ಅಧ್ಯಯನ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಇಲ್ಲ: ಆಕ್ರೋಶ

ಬಾಗೇಪಲ್ಲಿ: ಕೇಂದ್ರದ ಬರ ಅಧ್ಯಯನ ತಂಡವು ಜಿಲ್ಲೆಗೆ ಆಗಮಿಸಿದಿರುವುದಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳ ಶಾಸಕರು ಮತ್ತು ಸಂಸದರ ನಿರ್ಲಕ್ಷ್ಯವೇ ಕಾರಣ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಡಿ.ಟಿ. ಮುನಿಸ್ವಾಮಿ ಆರೋಪಿಸಿದರು.

ಈ ಸಂಬಂಧ ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ಕೇಂದ್ರದ ಬರ ಅಧ್ಯಯನ ತಂಡವು ಅಕ್ಟೋಬರ್ 3ರಂದು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಲಿದೆ. ಆದರೆ, ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡುವ ಜಿಲ್ಲೆಗಳ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಲ್ಲ. ಮುಂಗಾರು ಹಂಗಾಮಿನಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಶೇ 25ಕ್ಕಿಂತ ಕಡಿಮೆ ಪ್ರಮಾಣದ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ನದಿ, ನಾಲೆಗಳು ಇಲ್ಲ. ಸಣ್ಣ ರೈತರು ಖುಷ್ಕಿ ಬೇಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಬಿತ್ತನೆ ಪ್ರಮಾಣ ಕಡಿಮೆಯಾಗಿದೆ. ಬರದ ತೀವ್ರತೆಗೆ ರೈತರು ತತ್ತರಿಸಿದ್ದಾರೆ’ ಎಂದರು.

ಕೇಂದ್ರದ ಬರ ಅಧ್ಯಯನ ತಂಡವು ಜಿಲ್ಲೆಗೆ ಭೇಟಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಸಂಸದರು ಸರ್ಕಾರದ ಮೇಲೆ ಒತ್ತಡ ಹೇರಬೇಕಿತ್ತು. ಆದರೆ, ಈ ಕೆಲಸ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ