ಸಾರ್ವಜನಿಕರಿಗೆ ಕಿರುಕುಳ ಕೊಟ್ಟರೆ ಕ್ರಮ: ಲಿಂಗತ್ವ ಅಲ್ಪಸಂಖ್ಯಾತರಿಗೆ ಎಚ್ಚರಿಕೆ

ಸಾರ್ವಜನಿಕರಿಗೆ ಕಿರುಕುಳ ಕೊಟ್ಟರೆ ಕ್ರಮ: ಲಿಂಗತ್ವ ಅಲ್ಪಸಂಖ್ಯಾತರಿಗೆ ಎಚ್ಚರಿಕೆ

ಸಾರ್ವಜನಿಕರಿಗೆ ಕಿರುಕುಳ ಕೊಟ್ಟರೆ ಕ್ರಮ: ಲಿಂಗತ್ವ ಅಲ್ಪಸಂಖ್ಯಾತರಿಗೆ ಎಚ್ಚರಿಕೆ

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಕೆಲವರು, ಸಾರ್ವಜನಿಕರಿಗೆ ಕಿರುಕುಳ ನೀಡುವುದು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವುದು, ವಾಹನ ಸಂಚಾರಕ್ಕೆ ಅಡ್ಡಿ ಪಡಿಸುವುದು ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಕುರಿತು ದೂರುಗಳು ಬಂದಿವೆ. ಮಾಧ್ಯಮಗಳಲ್ಲಿಯೂ ವರದಿಗಳು ಪ್ರಕಟವಾಗಿವೆ. ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೆಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿ, ಸಿಬ್ಬಂದಿಗೆ ನಗರ ಪೊಲೀಸ್ ಕಮಿಷನರ್‌ ಸೀಮಾಂತ್‌ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.

ಇಂತಹ ಘಟನೆಗಳ ಕುರಿತು ಸಾರ್ವಜನಿಕರು ಆತಂಕಗೊಳ್ಳದೆ ಕೂಡಲೇ ಸಹಾಯವಾಣಿಗೆ (112) ಕರೆ ಮಾಡಿ, ಮಾಹಿತಿ ನೀಡಬಹುದು ಎಂದು ಕಮಿಷನರ್ ಮನವಿ ಮಾಡಿದ್ದಾರೆ.

* ಆಕ್ರಮಣಕಾರಿ ರೀತಿಯಲ್ಲಿ ಹಣ ವಸೂಲಿ, ಭಿಕ್ಷೆ ಬೇಡುವುದು, ವಾಹನ ಸಂಚಾರಕ್ಕೆ ಅಡ್ಡಿ ಪಡಿಸುವುದು, ಬೆದರಿಕೆ ಹಾಕುವುದು, ನಿಂದನಾತ್ಮಕ ವರ್ತನೆ, ಹಲ್ಲೆ, ಕಿರುಕುಳ ನೀಡುವ ಬಗ್ಗೆ ದೂರು ಬಂದಲ್ಲಿ ಸ್ಥಳೀಯ ಪೊಲೀಸರು ಕೂಡಲೇ ಸತ್ಯಾಸತ್ಯತೆ ಪರಿಶೀಲಿಸಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು

* ಸಿಗ್ನಲ್‌ಗಳು, ಮಾರುಕಟ್ಟೆಗಳು, ಬಸ್, ರೈಲು ನಿಲ್ದಾಣಗಳು ಹಾಗೂ ಇತರೆ ಸೂಕ್ಷ್ಮ ಪ್ರದೇಶಗಳು, ಮನೆ, ಸಮಾರಂಭ ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ ವಿರುದ್ಧ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು

* ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ದೂರುಗಳು ಬರುತ್ತಿರುವ ಸ್ಥಳಗಳನ್ನು ಗುರುತಿಸಿ, ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ಗಸ್ತು ನಿಯೋಜಿಸಬೇಕು

* ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರ ಜತೆಗೆ ಸಭೆ ನಡೆಸುವುದು ಹಾಗೂ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗದಂತೆ ಜಾಗೃತಿ ಮೂಡಿಸಬೇಕು

* ಲಿಂಗತ್ವ ಅಲ್ಪಸಂಖ್ಯಾತರಿಂದ ಕಿರುಕುಳ, ಕಾನೂನು ಉಲ್ಲಂಘನೆಯಾದಾಗ ಕೈಗೊಳ್ಳಬಹುದಾದ ತುರ್ತು ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು

* ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುಗಮ ಸಂಚಾರವನ್ನು ಖಚಿತ ಪಡಿಸುವುದರ ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ ಕಾನೂನುಬದ್ಧ ಹಕ್ಕುಗಳು, ಗೌರವ ಮತ್ತು ಘನತೆ ಸಂರಕ್ಷಿಸಬೇಕು

* ಪೊಲೀಸ್‌ ಸಿಬ್ಬಂದಿ, ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಹೇಳನಕಾರಿ ಅಥವಾ ನಿಂದನಾತ್ಮಕ ಪದಗಳನ್ನು ಬಳಸದೇ ಗೌರವಯುತವಾಗಿ ನಡೆಸಿಕೊಳ್ಳಬೇಕು

ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೆಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿ, ಸಿಬ್ಬಂದಿಗೆ ನಗರ ಪೊಲೀಸ್ ಕಮಿಷನರ್‌ ಸೀಮಾಂತ್‌ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.

ಇಂತಹ ಘಟನೆಗಳ ಕುರಿತು ಸಾರ್ವಜನಿಕರು ಆತಂಕಗೊಳ್ಳದೆ ಕೂಡಲೇ ಸಹಾಯವಾಣಿಗೆ (112) ಕರೆ ಮಾಡಿ, ಮಾಹಿತಿ ನೀಡಬಹುದು ಹಾಗೂ ಹತ್ತಿರದ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಬಹುದು ಎಂದು ಕಮಿಷನರ್ ಮನವಿ ಮಾಡಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ