ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪಾಲಡ್ಕ ಗ್ರಾಮಸಭೆಯಲ್ಲಿ ಚರ್ಚೆ

ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪಾಲಡ್ಕ ಗ್ರಾಮಸಭೆಯಲ್ಲಿ ಚರ್ಚೆ

ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪಾಲಡ್ಕ ಗ್ರಾಮಸಭೆಯಲ್ಲಿ ಚರ್ಚೆ

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿಯ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಕಡಂದಲೆ ಪಲ್ಕೆ ಗಣೇಶ್ ದರ್ಶನ್ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಗ್ರಾಮಸಭೆಯಲ್ಲಿ ಹರೀಶ್ ಶೆಟ್ಟಿ ಮಾತನಾಡುತ್ತಿದ್ದ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಮಧ್ಯಪ್ರವೇಶಿಸಿ, ಗ್ರಾಮಸ್ಥರ ಅಹವಾಲು ಆಲಿಸಲು ಮೊದಲು ಅವಕಾಶ ನೀಡಬೇಕು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹರೀಶ್ ಶೆಟ್ಟಿ, ಲೋಕಾಯುಕ್ತ ಪ್ರಕರಣ ಆದವರೂ ವೇದಿಕೆಯಲ್ಲಿ ಕುಳಿತಿದ್ದಾರೆ ಎಂದು ಸುಚರಿತ ಶೆಟ್ಟಿ ಹೆಸರು ಹೇಳದೆ ಆರೋಪಿಸಿದಾಗ ಇಬ್ಬರ ಮಧ್ಯೆ ಆರೋಪ ಪ್ರತ್ಯಾರೋಪ ನಡೆಯಿತು. ಹರೀಶ್ ಶೆಟ್ಟಿ ಆರೋಪವನ್ನು ತಳ್ಳಿಹಾಕಿದ ಸುಚರಿತ ಶೆಟ್ಟಿ, ನನ್ನ ವಿರುದ್ಧ ಯಾವುದೇ ಲೋಕಾಯುಕ್ತ ಪ್ರಕರಣ ಇಲ್ಲ, ಆರೋಪವನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದರು.

ಚರ್ಚೆ ಮುಂದುವರಿಯುತ್ತಿದ್ದಂತೆ ನೋಡೆಲ್ ಅಧಿಕಾರಿ ಮತ್ತು ಅಭಿವೃದ್ಧಿ ಅಧಿಕಾರಿ ಮಧ್ಯಪ್ರವೇಶಿಸಿ ಪ್ರಕರಣವನ್ನು ತಿಳಿಗೊಳಿಸಿದರು.

ಕಲ್ಲೋಳಿ ಪ್ರದೇಶದಲ್ಲಿ ರಸ್ತೆ ಹದಗೆಟ್ಟಿರುವುದರಿಂದ ಶೀಘ್ರ ದುರಸ್ತಿ ಕೈಗೊಳ್ಳಬೇಕು ಎಂದು ಸುನೀಲ್ ಮಡಿಕೆ ಮನವಿ ಮಾಡಿದರು.

ಶಿಥಿಲಗೊಂಡು ಅಪಾಯದ ಸ್ಥಿತಿಯಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬ ಅಳವಡಿಸುವಂತೆಯೂ ಒತ್ತಾಯಿಸಿದರು.

ಪ್ರೌಢಶಾಲೆ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ 2016ರ ರಾಜ್ಯಪತ್ರದ ಆದೇಶ ಉಲ್ಲಂಘಿಸಿ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥ ಭಾಸ್ಕರ್ ಆರೋಪಿಸಿದರು.

ಶಿಕ್ಷಣ ಇಲಾಖೆಯ ಮೇಲಧಿಕಾರಿಗಳಿಗೆ ದೂರು ನೀಡಿದರೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಸ್ಪಂದನೆ ನೀಡುತ್ತಿಲ್ಲ ಎಂದರು. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಲಾಗುವುದು ಎಂದು ಪಿಡಿಒ ಮಂಜುಳಾ ಹುನಗುಂದ ತಿಳಿಸಿದರು.

ಸಭೆಯಲ್ಲಿ ಹಿಂದಿನ ನಡವಳಿ, ಜಮಾ-ಖರ್ಚು, ವಾರ್ಡ್‌ ಸಭೆಗಳ ವರದಿ, ಕಾಮಗಾರಿಗಳು, ವಸತಿ-ನಿವೇಶನ ರಹಿತರ ಪಟ್ಟಿ, ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಮತ್ತು ಜೀವನೋಪಾಯ ಖಾತರಿ ಮಿಷನ್ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಕುರಿತು ಚರ್ಚಿಸಲಾಯಿತು. ಅರ್ಜಿ ಸ್ವೀಕರಿಸಲಾಯಿತು.

ಆಡಳಿತಾಧಿಕಾರಿ ಮಲ್ಲಿಕಾರ್ಜುನ, ಕೆಡಿಪಿ ಸದಸ್ಯ ಟಿ.ಎನ್.ಕೆಂಬಾರೆ, ತಾಲ್ಲೂಕು ಗ್ಯಾರಂಟಿ ಸಮಿತಿಯ ಗಣೇಶ್ ಆಚಾರ್ಯ, ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರವೀಣ್ ಸಿಕ್ವೇರ ಬಾಗವಹಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ