ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

ಬೆಳ್ತಂಗಡಿ: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

ಬೆಳ್ತಂಗಡಿ: ತಾಲ್ಲೂಕಿನ ಕರಿಮಣೇಲು ಗ್ರಾಮದ ಬಾಕ್ಯರಡ್ಡ ನಿವಾಸಿ ಅಶೋಕ ಪೂಜಾರಿ ಅವರಿಗೆ ಸೇರಿದ ತೆರೆದ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.

ಸುಮಾರು 30 ಅಡಿ ಆಳದ ಬಾವಿಯಲ್ಲಿ ಸುಮಾರು 6 ಅಡಿ ನೀರಿತ್ತು. ಆಹಾರ ಅರಸುತ್ತಿದ್ದ ವೇಳೆ ಚಿರತೆ ಬಾವಿಗೆ ಬಿದ್ದಿತ್ತು. ಇದು ಸೋಮವಾರ ಬೆಳಿಗ್ಗೆ ಮನೆಯವರ ಗಮನಕ್ಕೆ ಬಂದಿತ್ತು. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

ಮೂಡುಬಿದಿರೆ ಎಸಿಎಫ್ ಆಕಾಶ್ ಕದಂ ಮಾರ್ಗದರ್ಶನದಲ್ಲಿ ವೇಣೂರು ಆರ್‌ಎಫ್‌ಒ ಭರತ್, ಡಿಆರ್‌ಎಫ್‌ಒ ಅಶ್ವಿತ್, ಅರಣ್ಯ ರಕ್ಷಕ ದಿವಾಕರ, ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದರು. ಚಿರತೆಯನ್ನು ಹಿರಿಯ ಅಧಿಕಾರಿಗಳ ಸೂಚನೆಯಂತೆ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು.

ಡಾ.ಯಶಸ್ವಿನಿ ಚಿರತೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಸುಮಾರು ಮೂರು ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ರಕ್ಷಿಸಲಾಗಿದ್ದು, ಆರೋಗ್ಯವಾಗಿದೆ ಎಂದು ತಿಳಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ