ಸಂಚಾರ ಅವ್ಯವಸ್ಥೆ: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಸಂಚಾರ ಅವ್ಯವಸ್ಥೆ: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಸಂಚಾರ ಅವ್ಯವಸ್ಥೆ: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಕುಷ್ಟಗಿ (ಕೊಪ್ಪಳ ಜಿಲ್ಲೆ): ಸಮರ್ಪಕ ಬಸ್ ಸಂಚಾರ ವ್ಯವಸ್ಥೆ ಇಲ್ಲದಿರುವುದನ್ನು ಖಂಡಿಸಿ ತಾಲ್ಲೂಕಿನ ಟೆಂಗುಂಟಿ ಗ್ರಾಮದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು.

ಈ ವೇಳೆ ಪಟ್ಟಣಕ್ಕೆ ಬರುತ್ತಿದ್ದ ಬಸ್ ಅನ್ನು ಬಹಳಷ್ಟು ಹೊತ್ತು ತಡೆದು ನಿಲ್ಲಿಸಿದರು. ತಾಲ್ಲೂಕಿನ  ತಾವರಗೇರಾ, ಕಿಡದೂರು, ಮುದೇನೂರು ಮಾರ್ಗವಾಗಿ ಪಟ್ಟಣಕ್ಕೆ ಬರುವ ಬಸ್ಸಿನಲ್ಲಿ ಕೇವಲ ಐವತ್ತು ಜನರಿಗೆ ಅವಕಾಶ ಇದ್ದರೂ ವಿದ್ಯಾರ್ಥಿಗಳು ಸೇರಿ ನೂರಕ್ಕೂ ಅಧಿಕ ಜನರನ್ನು ಹತ್ತಿಸಿ ಕೊಳ್ಳುತ್ತಿರುವುದರಿಂದ ಬಸ್ ನಿಲ್ಲುವುದಿಲ್ಲ. ನಿಂತರೂ ಕಿಕ್ಕಿರಿದಿರುತ್ತದೆ.

ಬಸ್‌ ಏರಲು ಜಾಗ ಇರದ ಕಾರಣ ನಿತ್ಯ ಶಾಲಾ-ಕಾಲೇಜುಗಳಿಗೆ ಕುಷ್ಟಗಿ ಪಟ್ಟಣಕ್ಕೆ ಬರಲು ಹಾಗೂ ವಾಪಸ್‌ ಹೋಗಲು ವಿದ್ಯಾರ್ಥಿಗಳು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಸಮಸ್ಯೆ ವಿವರಿಸಿದರು.

ಈ ಸಮಸ್ಯೆಯನ್ನು ಹಲವು ಬಾರಿ ಅಧಿಕಾರಿಗಳು, ಹಾಲಿ, ಮಾಜಿ ಶಾಸಕರ ಗಮನಕ್ಕೆ ತಂದರೂ ಇದರ ಬಗ್ಗೆ ಗಮನಹರಿಸಿಲ್ಲ. ಇದೇ ರೀತಿ ಸಮಸ್ಯೆ ಮುಂದುವರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಸ್ಥಳಕ್ಕೆ ಬಂದ ಸಾರಿಗೆ ಸಂಸ್ಥೆ ಅಧಿಕಾರಿಗಳು ಇನ್ನೂ ಒಂದು ಹೆಚ್ಚುವರಿ ಬಸ್ ಓಡಿಸುವ ಕುರಿತು ಗ್ರಾಮಸ್ಥರಿಗೆ ಭರವಸೆ ನೀಡಿದರು. ಈ ಸಮಸ್ಯೆ ಮತ್ತೆ ಮುಂದುವರೆದರೆ ಈ ಮಾರ್ಗದಲ್ಲಿ ಬರುವ ಬಸ್‌ಗಳನ್ನು ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರಾದ ಉಮೇಶ್, ಹನುಮಗೌಡ ಇತರರು ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ