ಚಿಕ್ಕಬಳ್ಳಾಪುರ: ಕುಪ್ಪಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಆಂದೋಲನ

ಚಿಕ್ಕಬಳ್ಳಾಪುರ: ಕುಪ್ಪಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಆಂದೋಲನ

ಚಿಕ್ಕಬಳ್ಳಾಪುರ: ಕುಪ್ಪಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಆಂದೋಲನ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಕುಪ್ಪಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ‘ಪ್ರಜಾ ಸೇವಾ ಆಂದೋಲನ’ ನಡೆಯಿತು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರಿಂದ ಸಮಸ್ಯೆ, ಅಹವಾಲು ಹಾಗೂ ವಿವಿಧ ಸೌಲಭ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೆ ಒಳಪಡುವ ಕುಂದುಕೊರತೆಗಳು, ವೈಯಕ್ತಿಕ ಸೌಲಭ್ಯಗಳು, ವಿವಿಧ ಪ್ರಮಾಣಪತ್ರಗಳು, ಕಂದಾಯ, ಗ್ರಾಮ ಪಂಚಾಯಿತಿ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದಂತೆ 200ಕ್ಕೂ ಹೆಚ್ಚು ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರು.

ಸಮಾಜ ಕಲ್ಯಾಣಾಧಿಕಾರಿ ಅಂಜಲಿದೇವಿ, ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಾಗಿದೆ. ಇದೀಗ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆಡಳಿತ ವ್ಯವಸ್ಥೆಯೇ ಜನರ ಮನೆ ಬಾಗಿಲಿಗೆ ಬಂದಿರುವಂತಾಗಿದೆ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಯಾವುದೇ ಹಿಂಜರಿಕೆ ತೋರದೆ, ಲಿಖಿತ ರೂಪದಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಿ, ನಿಯಮಾನುಸಾರ ಪರಿಶೀಲನೆ ನಡೆಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ತಹಶೀಲ್ದಾರ್ ವಿ. ರಶ್ಮಿ, ಸಾರ್ವಜನಿಕರಿಂದ ಸ್ವೀಕರಿಸಲಾದ ಪ್ರತಿಯೊಂದು ಅರ್ಜಿಯನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಸೂಕ್ತವಾಗಿ ಪರಿಶೀಲಿಸಿ, ಅರ್ಜಿಯ ಸ್ವರೂಪ ಹಾಗೂ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅರ್ಹ ಪ್ರಕರಣಗಳಲ್ಲಿ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ದೊರೆಯುವ ವೈಯಕ್ತಿಕ ಹಾಗೂ ಸಮುದಾಯ ಸೌಲಭ್ಯಗಳು, ಗ್ರಾಮೀಣ ಕುಟುಂಬಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಮಕ್ಕಳ ಹಾಗೂ ಮಹಿಳೆಯರಿಗಾಗಿ ವಿವಿಧ ಇಲಾಖೆಗಳ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಗಳು, ಯುವ ಮತದಾರರ ನೋಂದಣಿ, ಸಾರ್ವಜನಿಕ ಸ್ವಚ್ಛತೆ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವದ ಕುರಿತು ಅಧಿಕಾರಿಗಳು ಸಾರ್ವಜನಿಕರಿಗೆ ವಿವರಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ ಗೌಡ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು. ನೋಡಲ್ ಅಧಿಕಾರಿ ಮಂಜುನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಾಬಾಜಾನ್ ಮತ್ತಿತರರು ಪಾಲ್ಗೊಂಡಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಸ್ ಅವರು ಬಾಲ್ಯವಿವಾಹದಿಂದ ಮಕ್ಕಳ ಮೇಲೆ ಉಂಟಾಗುವ ಸಾಮಾಜಿಕ ಹಾಗೂ ಕಾನೂನು ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಬಾಲ್ಯವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟಲು ಗ್ರಾಮ ಮಟ್ಟದಲ್ಲಿಯೇ ಜಾಗೃತಿ ಮೂಡಿಸುವುದು, ಅನುಮಾನಾಸ್ಪದ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಹಾಗೂ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಗಳನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ