ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಅಗತ್ಯ: ಸಂಸದ ಸಾಗರ್‌ ಖಂಡ್ರೆ

ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಅಗತ್ಯ: ಸಂಸದ ಸಾಗರ್‌ ಖಂಡ್ರೆ

ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಅಗತ್ಯ: ಸಂಸದ ಸಾಗರ್‌ ಖಂಡ್ರೆ

ಬೀದರ್‌: ಪ್ರಸಕ್ತ ಸಾಲಿನ ಎರಡು ದಿನಗಳ ಜಿಲ್ಲಾ ಮಟ್ಟದ ಸಿ.ಎಂ. ಕಪ್ ಕ್ರೀಡಾಕೂಟಕ್ಕೆ ನಗರದಲ್ಲಿ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಚಾಲನೆ ನೀಡಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟವನ್ನು ಸಂಸದ ಸಾಗರ್‌ ಖಂಡ್ರೆ ಉದ್ಘಾಟಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕಗಳನ್ನು ಗಳಿಸುವುದಷ್ಟೇ ಅಲ್ಲ, ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಬಹಳ ಅತ್ಯಗತ್ಯ ಎಂದು ಹೇಳಿದರು.

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ನಮಗೆ ಕಲಿಸಿಕೊಡುತ್ತದೆ. ಗೆಲುವಿನಿಂದ ಅಹಂಕಾರ ಪಡದೆ, ಸೋಲಿನಿಂದ ಕಲಿಯುವ ಮೂಲಕ ಮುಂದಿನ ಹಂತಕ್ಕೆ ಬೆಳೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ರಹೀಂ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಅನೇಕ ಜನ ಕ್ರೀಡಾಪಟುಗಳಿದ್ದಾರೆ. ಅವರಿಗೆ ಮೂಲಭೂತ ಸೌಕರ‍್ಯ‌ ಮತ್ತು ಸೂಕ್ತ ತರಬೇತಿ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಜಿಲ್ಲಾ ನೆಹರೂ ಕ್ರೀಡಾಂಗಣದ ಅಭಿವೃದ್ಧಿ ಹಾಗೂ ಜಿಲ್ಲೆಯ ಕ್ರೀಡಾಪಟುಗಳಿಗೆ ಅಗತ್ಯವಿರುವ ಆಧುನಿಕ ಸೌಲಭ್ಯಗಳನ್ನು ಒದಗಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಿಎಂ ಕಪ್ ಕ್ರೀಡಾಕೂಟವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ಕ್ರೀಡಾಪಟುವಿನಲ್ಲಿ ತನ್ನದೇ ಆದ ಸಾಮರ್ಥ್ಯ ಇರುತ್ತದೆ. ಅದನ್ನು ಹೊರತಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ತಿಳಿಸಿದರು.

ಯುವಜನತೆ ಮಾದಕ ದ್ರವ್ಯ ಹಾಗೂ ಅನಗತ್ಯ ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಕ್ರೀಡೆಗಳು ಸಹಕಾರಿ ಯಾಗಿವೆ. ಯುವ ಸಬಲೀಕರಣ ಮತ್ತು ಕ್ರೀಡಾ ಕ್ರೀಡಾಕೂಟ ಆಯೋಜಿಸಿ ಶ್ಲಾಘನಾರ್ಹ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ‌್‌ ಕುಮಾರ್‌ ಅಪ್ಪೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‍್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್ ಮತ್ತಿತರರು ಇದ್ದರು.

ಕ್ರೀಡಾಂಗಣದಲ್ಲಿ ತೋರುವ ಕ್ರೀಡಾ ಸ್ಫೂರ್ತಿ ಮತ್ತು ಶಿಸ್ತು ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಲು ನಮಗೆ ಮಾರ್ಗದರ್ಶಿಯಾಗಲಿದೆ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ