
ಸಚಿವ ಮುನಿಯಪ್ಪ ಹಿರಿಯೂರು ತಾಲ್ಲೂಕು ಪ್ರವಾಸ ಇಂದು
ಚಿತ್ರದುರ್ಗ: ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಅವರು ಸೆ. 12ರಂದು ಹಿರಿಯೂರು ತಾಲ್ಲೂಕು ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಬೆಳಿಗ್ಗೆ 11 ಗಂಟೆಗೆ ಹಿರಿಯೂರು ನಗರಕ್ಕೆ ಭೇಟಿ ನೀಡಲಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಲವು ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಅಲ್ಲಿ ದೊರೆಯುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಲಿದ್ದಾರೆ. ಜೊತೆಗೆ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಿದ್ದಾರೆ. ನಂತರ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.