ಬಳ್ಳಾರಿ: ಬಿಸಿಯೂಟ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಬಳ್ಳಾರಿ: ಬಿಸಿಯೂಟ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಬಳ್ಳಾರಿ: ಬಿಸಿಯೂಟ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಬಳ್ಳಾರಿ: ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ‘ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ’ದ ಸದಸ್ಯರು ಎಐಯುಟಿಯುಸಿ ನೇತೃತ್ವದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸಮಯಕ್ಕೆ ಸರಿಯಾಗಿ ಗೌರವಧನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಅಳಲು ತೋಡಿಕೊಂಡರು.

ಹಲವು ವರ್ಷಗಳಿಂದ ಬಾಕಿಯಿರುವ ಮೊಟ್ಟೆ ಸುಲಿದ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ಶಾಲಾ ಕೊಠಡಿ, ಶೌಚಾಲಯ ಸ್ವಚ್ಛತೆ ಹಾಗೂ ಬೀಗ ಹಾಕುವುದು ಸೇರಿದಂತೆ 'ಡಿ' ಗ್ರೂಪ್ ನೌಕರರ ಹೆಚ್ಚುವರಿ ಕೆಲಸಗಳನ್ನು ಕಾರ್ಮಿಕರಿಗೆ ವಹಿಸಬಾರದು ಎಂದು ಆಗ್ರಹಿಸಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘದ ರಾಜ್ಯ ಅಧ್ಯಕ್ಷೆ ಎ. ಶಾಂತಾ, ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಎ. ದೇವದಾಸ್, ಜಿಲ್ಲಾ ಕಾರ್ಯದರ್ಶಿ ಪ್ರಮೋದ್, ಮುಖಂಡರಾದ ಸುರೇಶ್, ಕಿರಣ್ ಕುಮಾರ್, ಕೊಟ್ರೇಶ್, ಗೀತಾ, ಅನಸೂಯಮ್ಮ ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ