
ಉಡುಪಿ: ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ
ಉಡುಪಿ: ಉಡುಪಿ ನಗರ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮಣಿಪಾಲ ಆರ್. ಎಸ್. ಬಿ. ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಶಿಬಿರವನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪ, ಸಮರ್ಥ ನಾಯಕತ್ವ ಇಂದು ವಿಶ್ವಕ್ಕೇ ಮಾದರಿಯಾಗಿದೆ ಎಂದರು.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿದರು.
ರಕ್ತದಾನ ಶಿಬಿರದಲ್ಲಿ ಕಸ್ತೂರ್ಬಾ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗದ ಸಹಯೋಗದಲ್ಲಿ 518 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಮಟ್ಟಾರು ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಕಿದಿಯೂರು, ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.