ಮಚ್ಚುವಾರಪಲ್ಲಿಯಲ್ಲಿ ಎರಡು ತಿಂಗಳಿನಿಂದ ಬರದ ಸ್ಥಿತಿ: ನೀರಿಗೆ ಗ್ರಾಮಸ್ಥರ ಪರದಾಟ

ಮಚ್ಚುವಾರಪಲ್ಲಿಯಲ್ಲಿ ಎರಡು ತಿಂಗಳಿನಿಂದ ಬರದ ಸ್ಥಿತಿ: ನೀರಿಗೆ ಗ್ರಾಮಸ್ಥರ ಪರದಾಟ

ಮಚ್ಚುವಾರಪಲ್ಲಿಯಲ್ಲಿ ಎರಡು ತಿಂಗಳಿನಿಂದ ಬರದ ಸ್ಥಿತಿ: ನೀರಿಗೆ ಗ್ರಾಮಸ್ಥರ ಪರದಾಟ

ಶ್ರೀನಿವಾಸಪುರ: ತಾಲ್ಲೂಕಿನ ಪುಲಗೂರಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಚ್ಚುವಾರಪಲ್ಲಿಯಲ್ಲಿ ಎರಡು ತಿಂಗಳಿನಿಂದ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಮಹಿಳೆಯರು ಮತ್ತು ಗಂಡುಮಕ್ಕಳು ಖಾಲಿ ಬಿಂದಿಗೆಗಳೊಂದಿಗೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಈಚೆಗೆ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟರಾಣಪ್ಪ, ‘ಗ್ರಾಮದಲ್ಲಿ ಎರಡು ತಿಂಗಳಿನಿಂದ ಕುಡಿಯುವ ನೀರು ಬರುತ್ತಿಲ್ಲ. ಈ ಸಂಬಂಧ ಎರಡು ತಿಂಗಳಿನಿಂದಲೂ ಪಂಚಾಯಿತಿ ಕಚೇರಿಗೆ ಅಲೆಯುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕಳೆದ ಎರಡು ತಿಂಗಳಿನಿಂದ ಪಂಚಾಯಿತಿಗೆ ಭೇಟಿ ನೀಡಿಲ್ಲ. ಪರಿಸ್ಥಿತಿ ಹೀಗಿದ್ದಾಗ, ನಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದ ಗಂಗಲಪ್ಪ ಮಾತನಾಡಿ, ‘ಗ್ರಾಮಸ್ಥರು ಹಾಗೂ ಜಾನುವಾರುಗಳು ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಅನಿವಾರ್ಯವಾಗಿ ಗ್ರಾಮದ ಕೆರೆ ನೀರನ್ನು ಕುಡಿಯಲು ಬಳಸುತ್ತಿದ್ದೆವು. ಆದರೆ, ಮಳೆಯಿಲ್ಲದ ಕಾರಣ ಈಗ ಕೆರೆಯೂ ಬತ್ತಿದೆ’ ಎಂದು ಹೇಳಿದರು.

ದೂರವಾಣಿ ಮೂಲಕ ಪ್ರತಿಭಟನ ಕಾರರ ಜೊತೆಗೆ ಮಾತನಾಡಿದ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ, ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಒಂದು ವೇಳೆ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಶೀಘ್ರ ಬಗೆಹರಿಯದಿದ್ದಲ್ಲಿ, ಶ್ರೀನಿವಾಸಪುರ ತಾಲ್ಲೂಕು ಕಚೇರಿ ಎದುರು ಖಾಲಿ ಬಿಂದಿಗೆಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನಾಗಮಣಿ, ಶಾರದಮ್ಮ, ಸುಬ್ಬಮ್ಮ, ಗಂಗುಲಮ್ಮ, ಮುನಿರಾಜಮ್ಮ, ಮುನೇಮ್ಮ, ಅಂಜಮ್ಮ, ವೆಂಕಟಮ್ಮ, ವೆಂಕಟರಮಣ, ವೆಂಕಟೇಶ್, ಗುರುಮೂರ್ತಿ, ಮುನಿನಾರಾಯಣ, ಕದಿರಪ್ಪ, ಗಂಗುಲಪ್ಪ, ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟರವಣ ಪಾಲ್ಗೊಂಡಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ