ಹಿಂದುತ್ವ ಇನ್‌ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್ ವಿರುದ್ಧ ಪೋಕ್ಸೊ ಪ್ರಕರಣ

ಹಿಂದುತ್ವ ಇನ್‌ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್ ವಿರುದ್ಧ ಪೋಕ್ಸೊ ಪ್ರಕರಣ

ಹಿಂದುತ್ವ ಇನ್‌ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್ ವಿರುದ್ಧ ಪೋಕ್ಸೊ ಪ್ರಕರಣ

ನವದೆಹಲಿ: ಹಿಂದುತ್ವ ಇನ್‌ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌ ಅವರ ವಿರುದ್ಧ ಪೋಕ್ಸೊ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜುಲೈ 20 ರಂದು ಪ್ರತಿಭಟನೆ ನಡೆಯುತ್ತಿತ್ತು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ ನಿಶು ಆಜಾದ್‌ ತಂದೆ ಸಂಜಯ್‌ ಕುಮಾರ್ ಅವರ ತಲೆ ಒಡೆದಿದ್ದೆ. ಪ್ರಬಲ ರಾಜಕೀಯ ಪಕ್ಷದ ಬೆಂಬಲದಿಂದ ನಾನು ಜೈಲಿಗೆ ಹೋಗದೆ ಹೊರಗುಳಿದಿದ್ದೇನೆ’ ಎಂದು ಭಾರದ್ವಾಜ್‌ ಅವರು ಸಂದರ್ಶನವೊಂದರಲ್ಲಿ ಹೇಳಿದ್ದರು.

ಭಾರದ್ವಾಜ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂಸತ್‌ ಮಾರ್ಗದ ಪೊಲೀಸ್‌ ಠಾಣೆ ಎದುರು ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ಶುಕ್ರವಾರ ಪ್ರತಿಭಟನೆ ನಡೆಸಿದ್ದರು.

ಸಿಜೆಪಿ ಪ್ರತಿಭಟನೆ ಬಳಿಕ, ಸ್ವತಂತ್ರ ಭಾರದ್ವಾಜ್ ಅವರನ್ನು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಭಾರದ್ವಾಜ್‌ ಅವರ ವಿರುದ್ಧ ಪೋಕ್ಸೊ, ಕೊಲೆ ಯತ್ನ, ಕ್ರಿಮಿನಲ್‌ ಬೆದರಿಕೆ ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಮಾಹಿತಿ ಹಂಚಿಕೊಂಡಿದ್ದಾರೆ.

ತನ್ನ ತಂದೆಯ ಮೇಲಿನ ಹಲ್ಲೆ ಖಂಡಿಸಿ ದೂರು ನೀಡಿದ ಬಳಿಕ ಆನ್‌ಲೈನ್‌ನಲ್ಲಿ ಕಿರುಕುಳ, ಆಕ್ಷೇಪಾರ್ಹ ಚಿತ್ರವನ್ನು ಹಂಚಿಕೊಂಡಿದ್ದರು, ಅತ್ಯಾಚಾರ ಬೆದರಿಕೆ ಬಂದಿದ್ದವು ಎಂದು ವಿದ್ಯಾರ್ಥಿನಿ ಈ ಹಿಂದೆ ಆರೋಪ ಮಾಡಿದ್ದರು. 

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ