ಗುಂಡ್ಲುಪೇಟೆ | ಕರಡಿ ಓಡಾಟ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಗುಂಡ್ಲುಪೇಟೆ | ಕರಡಿ ಓಡಾಟ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಗುಂಡ್ಲುಪೇಟೆ | ಕರಡಿ ಓಡಾಟ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿಯ ಸರ್ವ ಮಂಗಳಾದೇವಿ ದೇವಸ್ಥಾನದ ಒಳಗೆ ಭಾನುವಾರ ರಾತ್ರಿ ಕರಡಿ ಬಂದಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಗ್ರಾಮದಲ್ಲಿ ಕರಡಿಯೊಂದು ಓಡಾಡಿದ್ದು, ದೇವಸ್ಥಾನದ ಒಳಗೂ ನುಗ್ಗಿದೆ. ಇದನ್ನು ಗಮನಿಸಿದ ಸ್ಥಳೀಯರು ಮೊಬೈಲ್‌ ಫೋನಿನಲ್ಲಿ ವಿಡಿಯೊ ಸೆರೆ ಹಿಡಿದಿದ್ದಾರೆ. ಜನರ ಸದ್ದಿಗೆ ಕರಡಿ ಅಲ್ಲಿಂದ ಹೋಗಿದೆ. ಆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗ್ರಾಮದ ಸುತ್ತಮುತ್ತ ಅರಣ್ಯ ಪ್ರದೇಶ ಇರುವುದರಿಂದ ಆಗಾಗ್ಗೆ ವನ್ಯಪ್ರಾಣಿಗಳು ಊರಿನೊಳಗೆ ಬರುತ್ತಿದ್ದು, ಕರಡಿ ಓಡಾಟದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಗಸ್ತು ಹೆಚ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ