ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ

ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ

ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ

ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ಬಸವಣ್ಣ (65) ಎಂಬುವರು ಮೃತಪಟ್ಟಿದ್ದಾರೆ.

ಸೋಮವಾರ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಹುಲಿ ದಾಳಿ ನಡೆಸಿದ್ದು ಕೊಂದು ಹಾಕಿದೆ. ಅರ್ಧ ದೇಹವನ್ನು ತಿಂದಿದ್ದು, ಉಳಿದರ್ಧ ದೇಹವನ್ನು ಸಮೀಪದ ಕಬ್ಬಿನ ತೋಟಕ್ಕೆ ಎಳೆದೊಯ್ದಿದೆ.

ರಾತ್ರಿಯಾದರೂ ಬಸವಣ್ಣ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಜಮೀನಿಗೆ ತೆರಳಿ ನೋಡಿದಾಗ ಹುಲಿ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.

ಹುಲಿ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಜಮಾಯಿಸಿ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡುವವರೆಗೆ ಶವ ಎತ್ತಲು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯದ ಡಿಸಿಎಫ್ ಶ್ರೀಪತಿ, ತಹಶೀಲ್ದಾರ್ ಗಿರಿಜಾ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ