ಕೇರಳಂನ ತ್ರಿಶೂರ್‌ನಲ್ಲಿ ಅಪಘಾತ: ಎಂಟು ವಿದ್ಯಾರ್ಥಿಗಳ ಸಾವು

ಕೇರಳಂನ ತ್ರಿಶೂರ್‌ನಲ್ಲಿ ಅಪಘಾತ: ಎಂಟು ವಿದ್ಯಾರ್ಥಿಗಳ ಸಾವು

ಕೇರಳಂನ ತ್ರಿಶೂರ್‌ನಲ್ಲಿ ಅಪಘಾತ: ಎಂಟು ವಿದ್ಯಾರ್ಥಿಗಳ ಸಾವು

ತಿರುವನಂತಪುರ: ಕೇರಳಂನ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ ಸುಮಾರು 11.40ರ ಸುಮಾರಿಗೆ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಪ್ರದೇಶದಲ್ಲಿ ಅಪಘಾತ ನಡೆದಿದೆ. ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಎಂಟೂ ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿ ಮೃತದೇಹಗಳನ್ನು ವಾಹನದಿಂದ ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಅಪಘಾತಕ್ಕೊಳಗಾದ ಕಾರು ತಮಿಳುನಾಡಿನ ನೋಂದಣಿ ಸಂಖ್ಯೆ ಹೊಂದಿದ್ದು, ಮೃತರು ತಮಿಳುನಾಡಿನ ವಿದ್ಯಾರ್ಥಿಗಳಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

ಕಾರು ಗುರುವಾಯೂರು ಕಡೆಯಿಂದ ಕೊಡುಂಗಲ್ಲೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ