ಸಹಭಾಗಿತ್ವವಿಲ್ಲದೆ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಅಸಾಧ್ಯ: ಕೃಷ್ಣ ಬೈರೇಗೌಡ

ಸಹಭಾಗಿತ್ವವಿಲ್ಲದೆ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಅಸಾಧ್ಯ: ಕೃಷ್ಣ ಬೈರೇಗೌಡ

ಸಹಭಾಗಿತ್ವವಿಲ್ಲದೆ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಅಸಾಧ್ಯ: ಕೃಷ್ಣ ಬೈರೇಗೌಡ

ಬೆಂಗಳೂರು: ಕಸ ವಿಲೇವಾರಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ನಾಗರಿಕ ಸೇವೆಗಳ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯವಶ್ಯ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ಘನತ್ಯಾಜ್ಯ ನಿರ್ವಹಣೆ ಕುರಿತ ಪಾಲುದಾರರ ಸಮಾಲೋಚನಾ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ಮನೆಗಳಿಂದ ತ್ಯಾಜ್ಯ ಸಂಗ್ರಹಿಸುವುದರಿಂದ ಹಿಡಿದು ಅದರ ವಿಲೇವಾರಿಯವರೆಗೆ ಇಡೀ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ತರುವ ಅಗತ್ಯವಿದೆ. ಕೆಲವು ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಕಸ ಸಂಗ್ರಹಿಸುವ ವ್ಯವಸ್ಥೆ ಸಮರ್ಪಕವಾಗಿ ಆಗುತ್ತಿಲ್ಲ. ಜೊತೆಗೆ ಮೂಲದಲ್ಲೇ (ಹಸಿ ಮತ್ತು ಒಣ) ತ್ಯಾಜ್ಯ ವಿಂಗಡಿಸುವ ಪ್ರಕ್ರಿಯೆಯೂ ಸರಿಯಾಗಿ ಪಾಲನೆಯಾಗುತ್ತಿಲ್ಲ. ಇದರ ಪರಿಣಾಮವಾಗಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿದೆ’ ಎಂದರು.

‘ರಸ್ತೆ ಬದಿಯಲ್ಲಿ ತ್ಯಾಜ್ಯ ಸಂಗ್ರಹವಾಗುವುದರಿಂದ ನಗರದ ಸ್ವಚ್ಛತೆಗೆ ಧಕ್ಕೆಯಾಗುವುದಲ್ಲದೆ, ನಾಗರಿಕರಲ್ಲಿ ಇರಬೇಕಾದ ಜವಾಬ್ದಾರಿಯ ಭಾವನೆಯ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಒಂದು ಕಡೆ ತ್ಯಾಜ್ಯ ಬಿದ್ದಿರುವುದನ್ನು ಕಂಡಾಗ, ಇತರರೂ ಅದೇ ಸ್ಥಳದಲ್ಲಿ ಕಸ ಎಸೆಯಲು ಪ್ರೇರೇಪಿತರಾಗುತ್ತಾರೆ. ಇದು ಕ್ರಮೇಣ ಬ್ಲ್ಯಾಕ್‌ ಸ್ಪಾಟ್‌ಗಳಾಗಿ ಮಾರ್ಪಟ್ಟು, ಮಳೆನೀರು ಹರಿಯುವ ಚರಂಡಿ ವ್ಯವಸ್ಥೆ ಸೇರಿದಂತೆ ಇತರ ನಾಗರಿಕ ಮೂಲಸೌಕರ್ಯಗಳ ಮೇಲೆಯೂ ಸರಣಿ ಸಮಸ್ಯೆಗಳನ್ನು ತಂದೊಡ್ಡುತ್ತದೆ’ ಎಂದು ಹೇಳಿದರು.

ಎಲ್ಲ ಮನೆಗಳಿಗೂ ಸಮರ್ಪಕವಾಗಿ ತ್ಯಾಜ್ಯ ಸಂಗ್ರಹಣಾ ಸೇವೆ ತಲುಪದಿರುವುದೇ ಪ್ರಮುಖ ಸಮಸ್ಯೆಯಾಗಿದೆ. ಹಿಂದೆ ಟೆಂಡರ್ ಕರೆಯುವಾಗ ಇದ್ದ ಮನೆಗಳ ಸಂಖ್ಯೆ ಹಾಗೂ ಉತ್ಪತ್ತಿಯಾಗುತ್ತಿದ್ದ ತ್ಯಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ವಾಹನಗಳು ಮತ್ತು ಸಂಗ್ರಹಣಾ ಸಾಮರ್ಥ್ಯವನ್ನು ನಿಗದಿಪಡಿಸಲಾಗಿತ್ತು. ಆದರೆ ಈಗ ನಗರದ ಜನಸಂಖ್ಯೆ, ಮನೆಗಳ ಸಂಖ್ಯೆ ಹಾಗೂ ತ್ಯಾಜ್ಯ ಉತ್ಪಾದನೆ ಗಣನೀಯವಾಗಿ ಹೆಚ್ಚಾಗಿದೆ. ಹಳೆಯ ಟೆಂಡರ್ ಪ್ರಕಾರ ವಾಹನಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಹಾಲಿ ವ್ಯವಸ್ಥೆಯ ಮೇಲೆ ತೀವ್ರ ಒತ್ತಡ ಉಂಟಾಗಿದೆ. ವಿವಿಧ ತಾಂತ್ರಿಕ ಕಾರಣಗಳಿಂದ ಹೊಸ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲು ವಿಳಂಬವಾಗಿದ್ದು, ಈ ನ್ಯೂನ್ಯತೆಯನ್ನು ಸರಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

‘ಕಸ ಸಂಗ್ರಹಣೆಯಲ್ಲಿ ಕೆಲವು ಮಿತಿಗಳಿರುವುದು ನಿಜ. ಆದರೆ, ಈ ಲೋಪದೋಷಗಳನ್ನೇ ಮುಂದುವರಿಸಲು ಸಾಧ್ಯವಿಲ್ಲ. ಮನೆಮನೆಗೆ ತ್ಯಾಜ್ಯ ಸಂಗ್ರಹಣೆ ಸೇವೆ ತಲುಪುತ್ತಿಲ್ಲವೋ, ಅಂತಹ ಕಡೆಗಳಿಗೆ ಸೇವೆ ಒದಗಿಸುವುದು ಆಡಳಿತದ ಜವಾಬ್ದಾರಿ. ಈ ನಿಟ್ಟಿನಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತ್ಯಾಜ್ಯ ಸಂಗ್ರಹಣೆ ವಾಹನಗಳು ಬಂದಾಗ ನಾಗರಿಕರು ವಿಂಗಡಿಸಿದ ಕಸವನ್ನು ರಸ್ತೆ ಬದಿ ಎಸೆಯದೆ, ನೇರವಾಗಿ ಗಾಡಿಗಳಿಗೇ ನೀಡಬೇಕು’ ಎಂದು ವಿನಂತಿಸಿದರು.

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಪಾಲುದಾರ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ನೀಡಿದ ಪರಿಹಾರೋಪಾಯಗಳನ್ನು ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಅಳವಡಿಸಿಕೊಂಡು ಆ ಫಲಿತಾಂಶದ ಆಧಾರದಲ್ಲಿ ಮತ್ತೊಂದು ಸಭೆ ಏರ್ಪಡಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ