ಶರಣ ಸಾಹಿತ್ಯ ಪರಿಷತ್‌ ಉಪಾಧ್ಯಕ್ಷ ಕೆ.ಎಂ.ವೀರೇಶ್‌ ಇನ್ನಿಲ್ಲ

ಶರಣ ಸಾಹಿತ್ಯ ಪರಿಷತ್‌ ಉಪಾಧ್ಯಕ್ಷ ಕೆ.ಎಂ.ವೀರೇಶ್‌ ಇನ್ನಿಲ್ಲ

ಶರಣ ಸಾಹಿತ್ಯ ಪರಿಷತ್‌ ಉಪಾಧ್ಯಕ್ಷ ಕೆ.ಎಂ.ವೀರೇಶ್‌ ಇನ್ನಿಲ್ಲ

ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ರಾಜ್ಯ ಘಟಕದ ಉಪಾಧ್ಯಕ್ಷ, ಬಾಪೂಜಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ, ನಗರದ ಜೆಸಿಆರ್‌ ಬಡಾವಣೆ ನಿವಾಸಿ ಕೆ.ಎಂ.ವೀರೇಶ್‌ (66) ಅವರು ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಬಾಪೂಜಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ವಿಹಾರ ಮಾಡುವಾಗ ಅವರು ಕುಸಿದು ಬಿದ್ದರು. ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ವಿಜಯನಗರ ಜಿಲ್ಲೆ, ಕೂಡ್ಲಿಗಿ ತಾಲ್ಲೂಕಿನ ಕಾನಾಮಡುಗು ಗ್ರಾಮದವರಾದ ವೀರೇಶ್‌ ಅವರು ರಾಣೆಬೆನ್ನೂರಿನ ಎಸ್‌ಜೆಎಂ ಮಹಿಳಾ ಕಾಲೇಜಿನಲ್ಲಿ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದರು. ನಂತರ ಅವರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತಾಧಿಕಾರಿಯಾಗಿ 15 ವರ್ಷ ಕೆಲಸ ಮಾಡಿದ್ದರು. ಬಳಿಕ ನಗರದ ಪಿಳ್ಳೆಕೇರನಹಳ್ಳಿಯಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷರೂ ಆಗಿದ್ದ ಅವರು ನಗರದಲ್ಲಿ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವಚನ ಸಾಹಿತ್ಯ ಪರಿಷತ್‌ ಉಪಾಧ್ಯಕ್ಷರಾಗಿ ಮುರುಘಾ ಮಠದಲ್ಲಿ ಕಳೆದ ವರ್ಷ 13ನೇ ಅಖಿಲ ಭಾರತ ವಚನ ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದರು. ಕಲೆ, ಸಾಹಿತ್ಯ, ರಂಗಭೂಮಿ ಪ್ರಿಯರಾಗಿದ್ದ ಅವರು ನಗರದಲ್ಲಿ ನಡೆಯುವ ಕಲಾ ಚಟುವಟಿಕೆಗಳಿಗೆ ಸಾಥ್‌ ಕೊಡುತ್ತಿದ್ದರು. ನಟರಾಗಿ ಹಲವು ನಾಟಕಗಳಲ್ಲಿ ಅಭಿನಯಿಸಿದ್ದರು. ಎಸ್‌ಜೆಎಂ ಸಾಂಸ್ಕೃತಿಕ ಸಂಘದ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಿದ್ದರು. ನೀನಾಸಂ ನಾಟಕಗಳನ್ನು ನಗರಕ್ಕೆ ಕರೆಸಿ ಪ್ರದರ್ಶನ ಕೊಡಿಸುತ್ತಿದ್ದರು.

ಬೆಳಿಗ್ಗೆಯಿಂದ ಬಾಪೂಜಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹುಟ್ಟೂರು ಕಾನಾಮಡುಗು ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ