
ಶಿಡ್ಲಘಟ್ಟ|ಶಟಲ್ ಬ್ಯಾಡ್ಮಿಂಟನ್;ಇಂದಿರಾಗಾಂಧಿ ವಸತಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ
ಶಿಡ್ಲಘಟ್ಟ: ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿಯರು ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬಾಗೇಪಲ್ಲಿ ತಾಲ್ಲೂಕಿನ ತಂಡವನ್ನು ಸೋಲಿಸಿ, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ನಡೆದ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗಗಳಲ್ಲಿ ಜಯ ಗಳಿಸಿದ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿಯರಾದ ಪ್ರಾರ್ಥನಾ ಜಿ.ಎಂ, ಮಹೇಶ್ವರಿ ಹೆಚ್.ಡಿ, ಪಲ್ಲವಿ ಎಲ್, ನಿಶಾ ಎಂ ಹಾಗೂ ಶೃತಿ ಅವರು ವಿಜೇತ ತಂಡದಲ್ಲಿದ್ದರು.