ನರಗುಂದದಲ್ಲಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ ಪ್ರಕರಣ: ಇಬ್ಬರ ಬಂಧನ

ನರಗುಂದದಲ್ಲಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ ಪ್ರಕರಣ: ಇಬ್ಬರ ಬಂಧನ

ನರಗುಂದದಲ್ಲಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ ಪ್ರಕರಣ: ಇಬ್ಬರ ಬಂಧನ

ನರಗುಂದ: ಪೊಲೀಸ್‌ ಹಾಗೂ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯನ್ನು ಬೆದರಿಸಿ, ಬಲವಂತವಾಗಿ ₹80,000 ಪಡೆದಿದ್ದ ಪ್ರಕರಣದಲ್ಲಿ ಪಟ್ಟಣದ ನಿವಾಸಿಗಳಾದ ದುರಗಪ್ಪ ಜಮಖಂಡಿ, ರಫೀಕ ಲೋದಿ ಎಂಬುವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ವಾಸನ ಗ್ರಾಮದ ಕಿರಣ ಮೂಲಿಮನಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ನಡೆದಿದ್ದೇನು?: ಜುಲೈ 8ರಂದು ಹದಲಿ ಗ್ರಾಮದ ರಮೇಶ ದಾಸರ ಎಂಬುವರು ಹದಲಿ ಗ್ರಾಸ್‌ ಬಳಿ ನಿಂತಿದ್ದಾಗ, ಅಕ್ರಮವಾಗಿ ಪಡಿತರ ಅಕ್ಕಿ ತುಂಬಲು ಹೊರಟಿದ್ದೀಯ ಎಂದು ಮೂವರು ಆರೋಪಿಗಳು ಹೆದರಿಸಿ, ಹಲ್ಲೆ ನಡೆಸಿದ್ದಾರೆ.

ಪ್ರಕರಣ ಮುಚ್ಚಿಹಾಕುವುದಾಗಿ ಹೇಳಿ ₹20 ಸಾವಿರ ನಗದು ಕಿತ್ತುಕೊಂಡು, ರಮೇಶ ಅವರ ಮೊಬೈಲ್‌ ಫೋನ್‌ ಕಸಿದು ಅವರ ಫೋನ್ ಪೇ ಖಾತೆಯಿಂದ ₹30 ಸಾವಿರ, ಅವರ ಸ್ನೇಹಿತನ ಮೂಲಕ ₹30 ಸಾವಿರ ಫೋನ್‌ಪೇ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣ ಸಂಬಂಧ ಸೆ.15ರಂದು ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್‌ಪಿ ಪ್ರಭುಗೌಡ ಕಿರೇದಹಳ್ಳಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ