ಕೊಡಗು ಸೋಮವಾರಪೇಟೆಯಲ್ಲಿ ಪತ್ನಿ ಹತ್ಯೆ, ಗುಂಡಿಕ್ಕಿಕೊಂಡು ಪತಿ ಆತ್ಮಹತ್ಯೆ

ಕೊಡಗು ಸೋಮವಾರಪೇಟೆಯಲ್ಲಿ ಪತ್ನಿ ಹತ್ಯೆ, ಗುಂಡಿಕ್ಕಿಕೊಂಡು ಪತಿ ಆತ್ಮಹತ್ಯೆ

ಕೊಡಗು ಸೋಮವಾರಪೇಟೆಯಲ್ಲಿ ಪತ್ನಿ ಹತ್ಯೆ, ಗುಂಡಿಕ್ಕಿಕೊಂಡು ಪತಿ ಆತ್ಮಹತ್ಯೆ

ಸೋಮವಾರಪೇಟೆ (ಕೊಡಗು): ತಾಲ್ಲೂಕಿನ ಕುಂಬಾರಗಡಿಗೆ ಗ್ರಾಮದ ಸಮೀಪ ಸೋಮವಾರ ಪತ್ನಿ ಬೋಜಮ್ಮ (77) ಅವರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಪತಿ ಕೆ.ಟಿ.ಸುಬ್ಬಯ್ಯ (73) ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದಂಪತಿಗೆ ಐವರು ಮಕ್ಕಳಿದ್ದಾರೆ. ಒಬ್ಬ ಪುತ್ರನ ಜೊತೆ ಇವರು ವಾಸವಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ದೇಹಗಳನ್ನು ಕಂಡ ಊರಿನ ಪರಿಚಯಸ್ಥರು ಪುತ್ರನಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪುತ್ರ ಬರುವಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಯಾರಿಗಾದರೂ ಖಿನ್ನತೆ ಇದ್ದರೆ ಇಲ್ಲವೆ ಆತ್ಮಹತ್ಯೆಯ ಮನೋಭಾವ ಕಾಡುತ್ತಿದ್ದರೆ ಈ ಕೆಳಗಿನ ಸಹಾಯವಾಣಿ ಸಂಪರ್ಕಿಸಿ: ಟೆಲಿಮನಸ್‌–14416 ಅಥವಾ ಸಹಾಯ್‌– 080 25497777, 98864 44075)

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ