ಗಣೇಶ ಹಬ್ಬಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಡಿಜೆ ನಿಷೇಧ: ಡಿಸಿ ಆದೇಶ

ಗಣೇಶ ಹಬ್ಬಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಡಿಜೆ ನಿಷೇಧ: ಡಿಸಿ ಆದೇಶ

ಗಣೇಶ ಹಬ್ಬಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಡಿಜೆ ನಿಷೇಧ: ಡಿಸಿ ಆದೇಶ

ಬಳ್ಳಾರಿ: ಗೌರಿ-ಗಣೇಶ ಹಬ್ಬ ಹಾಗೂ ವಿಸರ್ಜನಾ ಮೆರವಣಿಗೆ ವೇಳೆ ಸಾರ್ವಜನಿಕ ಶಾಂತಿ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ಹಾಗೂ ಹೈ-ಬೇಸ್ ಸೌಂಡ್ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಆದೇಶಿಸಿದ್ದಾರೆ.

'ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023' ರ ಕಲಂ 152 ಮತ್ತು 163ರ ಅಡಿ ಈ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಸೆ.14ರಿಂದ ಹಬ್ಬ ಮುಕ್ತಾಯವಾಗುವವರೆಗೆ ಜಾರಿಯಲ್ಲಿರಲಿದೆ.

ಅಬ್ಬರದ ಡಿಜೆ ಸೌಂಡ್‌ನಿಂದ ವೃದ್ಧರು, ಮಕ್ಕಳು, ಬಾಣಂತಿಯರು ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರದಿ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ