ಕಸ್ತೂರಿರಂಗನ್ ವರದಿಗೆ ವಿರೋಧ: ಬೇಟೋಳಿ ಗ್ರಾಮ ಪಂಚಾಯಿತಿ ನಿರ್ಣಯ

ಕಸ್ತೂರಿರಂಗನ್ ವರದಿಗೆ ವಿರೋಧ: ಬೇಟೋಳಿ ಗ್ರಾಮ ಪಂಚಾಯಿತಿ ನಿರ್ಣಯ

ಕಸ್ತೂರಿರಂಗನ್ ವರದಿಗೆ ವಿರೋಧ: ಬೇಟೋಳಿ ಗ್ರಾಮ ಪಂಚಾಯಿತಿ ನಿರ್ಣಯ

ವಿರಾಜಪೇಟೆ: ಸಮೀಪದ ಬೇಟೋಳಿಯ ಸಹಕಾರ ಸಂಘದ ಸಭಾಂಗಣದಲ್ಲಿ ಈಚೆಗೆ ನಡೆದ ಬೇಟೋಳಿ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆಯಲ್ಲಿ ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಯಿತು. ಈ ಕುರಿತ ನಡಾವಳಿಗಳನ್ನು ಸರ್ಕಾರಕ್ಕೆ ಕಳುಹಿಸಿಕೊಡಲು ನಿರ್ಧರಿಸಲಾಯಿತು.

ಗ್ರಾಮ ಪಂಚಾಯಿತಿಯ ಆಡಳಿತ ಅಧಿಕಾರಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವರದಿಯ ಸಾಧಕ-ಬಾಧಕಗಳು, ಕೊಡಗಿನ ವಿಶಿಷ್ಟ ಭೌಗೋಳಿಕ ಪರಿಸ್ಥಿತಿಯ ಕುರಿತು ಗಂಭೀರ ಚರ್ಚೆ ನಡೆಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ, ‘ದೇವರ ಕಾಡುಗಳನ್ನು ಸ್ಥಳೀಯರೇ ಸ್ವಂತ ಮಕ್ಕಳಂತೆ ಪ್ರೀತಿಯಿಂದ ಕಾಪಾಡಿಕೊಂಡು ಬರುತ್ತಿದ್ದಾರೆ. ಕಸ್ತೂರಿರಂಗನ್ ವರದಿ ಜಾರಿಯಾದರೆ ಪರಿಸರ ಸೂಕ್ಷ್ಮ ವಲಯದ ನಿಯಮಗಳ ನೆಪದಲ್ಲಿ ನಮ್ಮ ಊರಿನ ದೇವಸ್ಥಾನಗಳಿಗೆ ತೆರಳಲು, ಪೂಜೆ ನೆರವೇರಿಸಲು ಹಾಗೂ ರೂಢಿಸಿಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆಗಳನ್ನು ನಡೆಸಲು ಕಾನೂನು ತೊಡಕುಗಳು ಎದುರಾಗಲಿವೆ’ ಎಂದರು.

ಜನಜೀವನಕ್ಕೂ ಪ್ರಕೃತಿಗೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದ್ದು, ಈ ವರದಿ ನಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಅಸ್ತಿತ್ವಕ್ಕೇ ಕುತ್ತು ತರಲಿದೆ. ದೂರದ ಬೆಂಗಳೂರಿನಲ್ಲೋ, ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತು ವರದಿ ಪರವಾಗಿ ವಾದಿಸುವವರಿಗೆ ಇಲ್ಲಿನ ಪರಿಸ್ಥಿತಿ ತಿಳಿಯುವುದಿಲ್ಲ. ದಿನನಿತ್ಯ ಇಲ್ಲಿನ ಮಣ್ಣಿನಲ್ಲಿ ಬದುಕು ಕಟ್ಟಿಕೊಂಡಿರುವ ಹಳ್ಳಿಯ ಜನ, ರೈತರು, ಕಾಫಿ ಬೆಳೆಗಾರರು ಅತಂತ್ರರಾಗಲಿದ್ದಾರೆ. ಸರ್ಕಾರದ ಉಪಗ್ರಹ ಆಧಾರಿತ ಮ್ಯಾಪಿಂಗ್ ಸಂಪೂರ್ಣ ಅವೈಜ್ಞಾನಿಕವಾಗಿದ್ದು’ ಎಂದರು.

ಬೇಟೋಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಚ್ಚಪ್ಪಂಡ ಬೋಪಣ್ಣ ಮಾತನಾಡಿ, ನಮ್ಮ ಭೂಮಿ, ನಮ್ಮ ಸ್ವಾತಂತ್ರ್ಯದ ಮೇಲೆ ಹೊರಗಿನಿಂದ ಬಂದು ಹೊಸ ನಿರ್ಬಂಧ ಹೇರುವುದು ಯಾವ ನ್ಯಾಯ? ಅರಣ್ಯ ಪ್ರದೇಶಗಳು ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಇಲ್ಲಿನ ಜನರನ್ನು ಒಕ್ಕಲೆಬ್ಬಿಸುವ ನೀತಿಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದರು.

ಈ ವರದಿ ಜಾರಿಗೆ ಬಂದರೆ ರಸ್ತೆ, ವಿದ್ಯುತ್, ಕುಡಿಯುವ ನೀರು ಹಾಗೂ ವಾಸದ ಮನೆಗಳ ನಿರ್ಮಾಣ ಸೇರಿದಂತೆ ಯಾವುದೇ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುವುದಿಲ್ಲ. ಕಾಫಿ ತೋಟ ಹಾಗೂ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಳ್ಳಲಿದೆ ಎಂದು ಗ್ರಾಮಸ್ಥರಾದ ಪ್ರವೀಣ್, ಬೇಟೋಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಜಾಕ್, ಸುದೀಶ್ ಮತ್ತು ಹರೀಶ್ ಎಚ್ಚರಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಮಾತನಾಡಿ, ಗ್ರಾಮ ಸಭೆಯಲ್ಲಿ ಸಾರ್ವಜನಿಕರು ವ್ಯಕ್ತಪಡಿಸಿದ ಆತಂಕ ಹಾಗೂ ವರದಿಯನ್ನು ವಿರೋಧಿಸಿ ತೆಗೆದುಕೊಂಡಿರುವ ನಿರ್ಣಯದ ಸಂಪೂರ್ಣ ದಾಖಲೆಯನ್ನು ಸಿದ್ಧಪಡಿಸಿ ಶೀಘ್ರವೇ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಚರ್ಚಿಸಲಾದ ಅಂಶಗಳನ್ನು ಸಭೆಯ ನಿರ್ಣಯಗಳನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ನೋಡಲ್ ಅಧಿಕಾರಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹೇಶ್ ಭರವಸೆ ನೀಡಿದರು.

ಸಭೆಯಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ, ಸದಸ್ಯರಾದ ಸವಿತಾ, ರತಿ ಹಾಗೂ ಇತರರು ಮಾತನಾಡಿದರು. ಸಭೆಯಲ್ಲಿ ಅಧಿಕಾರಿ ಶಿವಕುಮಾರ್ ಅವರೂ ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ