ಕೋಲಾರ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಬಿರುಸಿನ ಮಳೆ

ಕೋಲಾರ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಬಿರುಸಿನ ಮಳೆ

ಕೋಲಾರ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಬಿರುಸಿನ ಮಳೆ

ಕೋಲಾರ: ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದ ಕೆಲವೆಡೆ ಗುರುವಾರ ಸಂಜೆ ಬಿರುಸಿನ ಮಳೆಯಾಯಿತು.

ಬೆಳಿಗ್ಗೆಯಿಂದಲೇ ಮೋಡ ಆವರಿಸಿಕೊಂಡಿತ್ತು. ಸಂಜೆ 5 ಗಂಟೆ ಸುಮಾರಿಗೆ ಜೋರು ಮಳೆಯಾಯಿತು.

ಸುಮಾರು ಮುಕ್ಕಾಲು ತಾಸು ಸುರಿದಿದ್ದು, ಹಲವೆಡೆ ರಸ್ತೆಗಳು ಜಲಾವೃತವಾದವು. ಕುವೆಂಪು ಉದ್ಯಾನ ಬಳಿ ಅಂತರಗಂಗೆ ರಸ್ತೆಯುದ್ದಕ್ಕೂ ನೀರು ನಿಂತಿತ್ತು. ಈ ಹಾದಿಯಲ್ಲಿ ಸಾಗಲು ವಾಹನ ಸವಾರರು ಪರದಾಡಿದರು. ಹಲವೆಡೆ ಚರಂಡಿಗಳಲ್ಲಿ ಕಸ ತುಂಬಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಾಗವಿಲ್ಲ. ಹೀಗಾಗಿ, ಮಳೆ ನೀರು ತ್ಯಾಜ್ಯದೊಂದಿಗೆ ರಸ್ತೆಯತ್ತ ಹರಿಯುತ್ತಿದೆ.

ಕೋಲಾರ ತಾಲ್ಲೂಕಿನ ಸೀತಿಯಲ್ಲಿ 32 ಮಿ.ಮೀ ಮಳೆಯಾಗಿದೆ. ಕುರುಗಲ್‌ನಲ್ಲಿ 16 ಮಿ.ಮೀ, ಹರಟಿಯಲ್ಲಿ 15 ಮಿ.ಮೀ. ಹಾಗೂ ವಡಗೂರಿನಲ್ಲಿ 12 ಮಿ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ಬಂಗಾರಪೇಟೆ, ಮಾಲೂರು, ಶ್ರೀನಿವಾಸಪುರ ಹಾಗೂ ಮುಳಬಾಗಿಲು ತಾಲ್ಲೂಕಿನ ವಿವಿಧೆಡೆ ತುಂತುರು ಮಳೆಯಾಗಿದೆ.

ಕಳೆದ ಮೂರು ದಿನಗಳಿಂದ ವಿವಿಧೆಡೆ ಅಲ್ಪಸ್ವಲ್ಪ ಮಳೆ ಆಗುತ್ತಿದೆ. ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರ ಮೊಗದಲ್ಲಿ ತುಸು ನಗು ತಂದಿದೆ. ‌ಈಗಾಗಲೇ ಜಿಲ್ಲೆಯ ಹಲವು ಕೆರೆಗಳು ಬರಿದಾಗುತ್ತಿವೆ. ಹಸಿರು ಮೇವಿನ ಕೊರತೆ ಎದುರಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ