ಚಿಕ್ಕಬಳ್ಳಾಪುರಳ: ಪದವೀಧರ ಕ್ಷೇತ್ರದ ಚುನಾವಣೆಗೆ ಸಹಾಯವಾಣಿ ಸ್ಥಾಪನೆ

ಚಿಕ್ಕಬಳ್ಳಾಪುರಳ: ಪದವೀಧರ ಕ್ಷೇತ್ರದ ಚುನಾವಣೆಗೆ ಸಹಾಯವಾಣಿ ಸ್ಥಾಪನೆ

ಚಿಕ್ಕಬಳ್ಳಾಪುರಳ: ಪದವೀಧರ ಕ್ಷೇತ್ರದ ಚುನಾವಣೆಗೆ ಸಹಾಯವಾಣಿ ಸ್ಥಾಪನೆ

ಚಿಕ್ಕಬಳ್ಳಾಪುರ: ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಒದಗಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ರಾಜಕೀಯ ಪ್ರತಿನಿಧಿಗಳ ಸಭೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳು ಹಾಗೂ ಮತದಾರರ ಪಟ್ಟಿ ಕುರಿತು ಮಾಹಿತಿ ನೀಡಿ ಮಾತನಾಡಿದರು.

ಚುನಾವಣಾ ವೇಳಾಪಟ್ಟಿಯ ಅಧಿಸೂಚನೆ ಸೆ.29 ರಂದು ಪ್ರಕಟವಾಗಲಿದೆ. ಚಿಕ್ಕಬಳ್ಳಾಪುರ ಸೇರಿದಂತೆ ಐದು ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 25,584 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 14,597 ಪುರುಷರು ಹಾಗೂ 10,987 ಮಹಿಳಾ ಮತದಾರರಿದ್ದಾರೆ. ಅರ್ಹ ಪದವೀಧರರು ಸೆ.29ರೊಳಗಾಗಿ ನಮೂನೆ-18ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಆಗಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಚುನಾವಣಾ ವೇಳಾಪಟ್ಟಿಯಂತೆ ಸೆ.29 ರಂದು ಅಧಿಸೂಚನೆ ಪ್ರಕಟವಾಗಲಿದೆ. ಅ.6 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಅ.7 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.9 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಅ.23 ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. 27 ರಂದು ಮತಗಳ ಎಣಿಕೆ ನಡೆಯಲಿದೆ. ಅ.31 ರೊಳಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ 15 ಫ್ಲೈಯಿಂಗ್ ಸ್ಕ್ವಾಡ್‌ಗಳು, 8 ವಿಡಿಯೊ ಸರ್ವೆಲೆನ್ಸ್ ತಂಡಗಳು ಹಾಗೂ 8 ಸೆಕ್ಟರ್ ಅಧಿಕಾರಿಗಳತಂಡಗಳನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಕರ್ನಾಟಕ ವೆಬ್‌ಸೈಟ್ ಹಾಗೂ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪಡೆಯಬಹುದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ