ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಹೋರಾಟ: ಬೃಹತ್ ಪಾದಯಾತ್ರೆಗೆ ಬಿಜೆಪಿ ಸಜ್ಜು:

ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಹೋರಾಟ: ಬೃಹತ್ ಪಾದಯಾತ್ರೆಗೆ ಬಿಜೆಪಿ ಸಜ್ಜು:

ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಹೋರಾಟ: ಬೃಹತ್ ಪಾದಯಾತ್ರೆಗೆ ಬಿಜೆಪಿ ಸಜ್ಜು:

ಲಿಂಗಸುಗೂರು (ರಾಯಚೂರು ಜಿಲ್ಲೆ): ರಾಜ್ಯದ ಕಾಂಗ್ರೆಸ್ ಸರ್ಕಾರವು ಹಗರಣಗಳಲ್ಲಿ ಮುಳುಗಿದೆ ಹಾಗೂ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕವು ಲಿಂಗಸುಗೂರಿನಿಂದ ಬಳ್ಳಾರಿವರೆಗೆ ಬೃಹತ್‌ ಪಾದಯಾತ್ರೆ ನಡೆಸಲು ಸಜ್ಜಾಗಿದೆ. 

ಲಿಂಗಸುಗೂರಿನಲ್ಲಿ ಮಂಗಳವಾರ (ಸೆ.1) ಬೃಹತ್‌ ಸಮಾವೇಶ ನಡೆಸಿ, ಪಾದಯಾತ್ರೆಗೆ ಚಾಲನೆ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲ್ಲಿನ ಬೈಪಾಸ್ ರಸ್ತೆ ಬದಿಯ ನಾಲ್ಕು ಎಕರೆ ಪ್ರದೇಶದ ಪೈಕಿ 2 ಎಕರೆಯಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಇನ್ನುಳಿದ ಜಾಗದಲ್ಲಿ ಕಾರ್ಯಕರ್ತರಿಗೆ ಊಟಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. 

ಸಮಾವೇಶ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ಬಾವುಟ ಹಾಗೂ ಬೃಹತ್ ಬ್ಯಾನರ್‌ಗಳನ್ನು ಕಟ್ಟಲಾಗಿದೆ. ಸಮಾವೇಶದಲ್ಲಿ ಸುಮಾರು 30 ಸಾವಿರ ಜನ ಭಾಗವಹಿಸುವ ಅಂದಾಜು ಇದೆ. 

ಪಾದಯಾತ್ರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಶಾಸಕರಾದ ಸುನಿಲ್‌ ಕುಮಾರ, ಸಿ.ಟಿ.ರವಿ, ಅರವಿಂದ ಬೆಲ್ಲದ ಸೇರಿದಂತೆ ಪಕ್ಷದ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವಾಪಸ್‌ ತರಬೇಕು ಹಾಗೂ ರಾಜ್ಯದ ಎಲ್ಲ ತಾಲ್ಲೂಕುಗಳನ್ನು ಸಂಪೂರ್ಣ ಬರಪೀಡಿತ ಪ್ರದೇಶ ಘೋಷಣೆ ಮಾಡುವಂತೆಯೂ ಸಮಾವೇಶದಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಲು ತೀರ್ಮಾನಿಸಲಾಗಿದೆ.

ಸೆ.1ರಂದು ಲಿಂಗಸುಗೂರಿನಿಂದ ಪಾದಯಾತ್ರೆ ಆರಂಭಗೊಂಡು ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ, ಸಂಡೂರು ಮಾರ್ಗವಾಗಿ ಬಳ್ಳಾರಿ ತಲುಪಲಿದೆ.

ಬಿಗಿ ಬಂದೋಬಸ್ತ್‌: ಪಾದಯಾತ್ರೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ನೇತೃತ್ವದಲ್ಲಿ 700ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ