
CM ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ: DMK ನಾಯಕರ ವಿರುದ್ಧ ಎಫ್‌ಐಆರ್
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಆಡಳಿತಾರೂಢ ಡಿಎಂಕೆ ಪಕ್ಷದ ಹಿರಿಯ ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ, ಮಾಜಿ ಸಚಿವ ಪಿ. ಕೆ. ಶೇಖರ್ ಬಾಬು ಹಾಗೂ ಶಾಸಕ ವಸಂತಂ ಕಾರ್ತಿಕೇಯನ್ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 12ರಂದು ನಡೆದ ಡಿಎಂಕೆ ಪಕ್ಷದ ಪ್ರತಿಭಟನೆಯಲ್ಲಿ ವಿಜಯ್ ವಿರುದ್ಧ ಡಿಎಂಕೆ ನಾಯಕರು ನಿಂದನಾತ್ಮಕ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಲಾಗಿದೆ.
Tags
Nation