ಹೆಲಿಕಾಪ್ಟರ್‌ನಲ್ಲಿ ಓಡಾಡುವುದರಿಂದ CM ಪ್ರಜಾಸೇವಕನಾಗಲು ಸಾಧ್ಯವಿಲ್ಲ: ವಿಜಯೇಂದ್ರ

ಹೆಲಿಕಾಪ್ಟರ್‌ನಲ್ಲಿ ಓಡಾಡುವುದರಿಂದ CM ಪ್ರಜಾಸೇವಕನಾಗಲು ಸಾಧ್ಯವಿಲ್ಲ: ವಿಜಯೇಂದ್ರ

ಹೆಲಿಕಾಪ್ಟರ್‌ನಲ್ಲಿ ಓಡಾಡುವುದರಿಂದ CM ಪ್ರಜಾಸೇವಕನಾಗಲು ಸಾಧ್ಯವಿಲ್ಲ: ವಿಜಯೇಂದ್ರ

ಜಂಗಮರ‌ ಕಲ್ಗುಡಿ (ಗಂಗಾವತಿ): ಬಳ್ಳಾರಿ ಚಲೊ ಪಾದಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಹಲವು ಬಿಜೆಪಿ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಗಂಗಾವತಿ ತಾಲ್ಲೂಕಿನ ಜಂಗಮರ ಕಲ್ಗುಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಅವರು ನಿನ್ನೆ ನಾಡಿನ ದೊರೆ ಎಂದು ಕರೆಯಬೇಡಿ, ಪ್ರಜಾಸೇವಕ ಎಂದು ಕರೆಯಿರಿ ಎಂದು ಹೇಳಿದ್ದಾರೆ. ಆದರೆ, ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲೇ ಇದ್ದ ಮುಖ್ಯಮಂತ್ರಿ, ನಾವು ಪಾದಯಾತ್ರೆ ಆರಂಭಿಸದಿದ್ದರೆ ಉತ್ತರ ಕರ್ನಾಟಕದತ್ತ ಬರುತ್ತಿದ್ದರೇ ಎಂಬುದನ್ನು ಜನರೇ ಪ್ರಶ್ನಿಸುತ್ತಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ ಜೀವನದ ಬಹುದೊಡ್ಡ ಆಸೆಗಳು ಬಿಡದಿ ಟೌನ್‌ಶಿಪ್ ಮತ್ತು ಕನಕಪುರ ಏರ್‌ಪೋರ್ಟ್ ಎಂದು ಕಾಣುತ್ತಿದೆ. ಇವೆರಡೂ ಯೋಜನೆಗಳು ಪೂರ್ಣಗೊಂಡರೆ ಸಾಕು ಎನ್ನುವಂತಿದ್ದಾರೆ ಎಂದರು.

ಬಡವರ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡಲಾಗುತ್ತಿದೆ, ಬರ ಪರಿಹಾರ ನೀಡಿಲ್ಲ. ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ‘ಪ್ರಜಾಸೇವಕ’ ಎಂದು ಹೇಗೆ ಕರೆಯಲು ಸಾಧ್ಯ ಎಂದು ಪ್ರಶ್ನಿಸಿದರು.

ಜನರಿಗೆ ಮತ್ತು ಬಡವರಿಗೆ ಅನುಕೂಲವಾಗುವ ಯೋಜನೆಗಳನ್ನು ನೀಡಿದಾಗ ಮಾತ್ರ ಜನರು ಅವರನ್ನು ಪ್ರಜಾಸೇವಕ ಎಂದು ಕರೆಯುತ್ತಾರೆ. ಕುರಿ ಕಾಯುವ ಸಮುದಾಯದ ಮಕ್ಕಳಿಗೆ ಸಮರ್ಪಕ ಶಿಕ್ಷಣ ಸಿಗುತ್ತಿಲ್ಲ, ಉಚಿತ ಔಷಧವೂ ಸಿಗುತ್ತಿಲ್ಲ. ಬಡವರ ಪರವಾಗಿ ನೀವು ಏನು ಮಾಡಿದ್ದೀರಿ? ಜನರಿಗೆ ಇದು ಉತ್ತಮ ಸರ್ಕಾರ ಎಂಬ ಭಾವನೆ ಮೂಡಿದರೆ ಮಾತ್ರ ನಿಮ್ಮನ್ನು ಪ್ರಜಾಸೇವಕ ಎಂದು ಕರೆಯುತ್ತಾರೆ ಎಂದು ಹೇಳಿದರು.

ಬಣ್ಣದ ಮಾತುಗಳನ್ನಾಡಿ, ಸೂಟು-ಬೂಟು ಧರಿಸಿ, ಹೆಲಿಕಾಪ್ಟರ್‌ನಲ್ಲಿ ಓಡಾಡಿದ ಮಾತ್ರಕ್ಕೆ ಯಾರೂ ಪ್ರಜಾಸೇವಕರಾಗುವುದಿಲ್ಲ. ಜನರ ಕಷ್ಟಗಳಿಗೆ ಸ್ಪಂದಿಸಿ, ಅವರ ಬದುಕಿನಲ್ಲಿ ಬದಲಾವಣೆ ತಂದಾಗ ಮಾತ್ರ ನಿಜವಾದ ಪ್ರಜಾಸೇವೆ ಸಾಧ್ಯ” ಎಂದು ವಿಜಯೇಂದ್ರ ಹೇಳಿದರು.

ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ದೊರೆತು ಮತ್ತೆ ಸಚಿವರಾಗುತ್ತಾರೆ ಎಂಬ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ಸಿಗುವ ಮೊದಲು ₹187 ಕೋಟಿ ಹಣವನ್ನು ವಾಪಸ್ ತಂದುಕೊಡಲಿ ಎಂದು ಸವಾಲು ಹಾಕಿದರು.

ನಾವು ಸಾಕಷ್ಟು ಕ್ಲೀನ್ ಚಿಟ್‌ಗಳನ್ನು ನೋಡಿದ್ದೇವೆ. ಹಿಂದಿನ ಸರ್ಕಾರಗಳಲ್ಲಿ ಎಸಿಬಿ ರಚನೆ ಮಾಡಿಕೊಂಡು ಹೇಗೆ ಕ್ಲೀನ್ ಚಿಟ್ ಪಡೆದುಕೊಂಡರು ಎಂಬುದನ್ನೂ ನೋಡಿದ್ದೇವೆ. ಆದ್ದರಿಂದ ಕ್ಲೀನ್ ಚಿಟ್ ಎಂಬ ಮಾತುಗಳನ್ನು ಜನರು ನಂಬುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ಗಂಗಾವತಿ ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದಿಂದ ಆರನೇ ದಿನದ ಪಾದಯಾತ್ರೆ ಆರಂಭವಾಗಿದ್ದು ಗಂಗಾವತಿ ಮಾರ್ಗದ ಮೂಲಕ ಭಾನುವಾರ ಸಂಜೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಲುಪಲಿದೆ. ಮಾರ್ಗದುದ್ದಕ್ಕೂ ವಿದ್ಯಾನಗರ ಹಾಗೂ ಸುತ್ತಲಿನ ಗ್ರಾಮದ ಜನ ಹೂಮಳೆಗೆರೆದು ಸ್ವಾಗತ ಕೋರಿದರು.

ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಎಚ್.ಕೆ. ಸುರೇಶ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಜನಾರ್ದನ ರೆಡ್ಡಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಶರಣು ತಳ್ಳಿಕೇರಿ, ಪಕ್ಷದ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ಮುಖಂಡ ಡಾ. ಬಸವರಾಜ ಕ್ಯಾವಟರ್ ಇದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ