ಭಾರತ ರತ್ನ CNR ರಾವ್‌ಗೆ SIR ನೋಟಿಸ್ ನೀಡಿಲ್ಲ: ಜಿಬಿಎ ಮಹೇಶ್ವರ್ ರಾವ್ ಸ್ಪಷ್ಟನೆ

ಭಾರತ ರತ್ನ CNR ರಾವ್‌ಗೆ SIR ನೋಟಿಸ್ ನೀಡಿಲ್ಲ: ಜಿಬಿಎ ಮಹೇಶ್ವರ್ ರಾವ್ ಸ್ಪಷ್ಟನೆ

ಭಾರತ ರತ್ನ CNR ರಾವ್‌ಗೆ SIR ನೋಟಿಸ್ ನೀಡಿಲ್ಲ: ಜಿಬಿಎ ಮಹೇಶ್ವರ್ ರಾವ್ ಸ್ಪಷ್ಟನೆ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಗೌರವಾನ್ವಿತ ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಸುದ್ದಿ ಪ್ರಸಾರವಾಗಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸ್ಪಷ್ಟನೆ ನೀಡಿದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗೌರವಾನ್ವಿತ ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಅವರಿಗೆ ಯಾವುದೇ ನೋಟೀಸ್ ಜಾರಿ ಮಾಡಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸ್ಪಷ್ಟಪಡಿಸಿದ್ದಾರೆ.

ಗೌರವಾನ್ವಿತ ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ಗೌರವಾನ್ವಿತ ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಹಾಗೂ ಅವರ ಕುಟುಂಬದ ಸದಸ್ಯರಿಗೆ Enumeration Forms (ಗಣತಿ ನಮೂನೆ)ಗಳನ್ನು ರಾಜ್ಯದ SVEEP ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಮಾನ್ಯ ಆಯುಕ್ತರೊಂದಿಗೆ ಮನೆಗೆ ತೆರಳಿ ಗೌರವಪೂರ್ವಕವಾಗಿ ನೀಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಲಾಗಿದೆ.

ಗೌರವಾನ್ವಿತ ಭಾರತ ರತ್ನ ಪ್ರೊಫೆಸರ್ ಸಿ.ಎನ್. ರಾವ್ ಅವರು 2002ನೇ ಸಾಲಿನ 76-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಭಾಗ ಸಂಖ್ಯೆ 129ರಲ್ಲಿ ಕ್ರಮ ಸಂಖ್ಯೆ 431ರ ಮತದಾರರಾಗಿರುತ್ತಾರೆ. ಆಗ ಮಾನ್ಯರ ಹೆಸರು 'ರಾಮ' ಎಂದು ನಮೂದಾಗಿತ್ತು. ಪ್ರಸ್ತುತ 157-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 59ರಲ್ಲಿ ಕ್ರಮ ಸಂಖ್ಯೆ 187ರಲ್ಲಿ 'ಪ್ರೊಫೆಸರ್ ಸಿ.ಎನ್. ರಾವ್ ಎಂ' ಎಂಬ ಹೆಸರಿನೊಂದಿಗೆ ಮತದಾರರಾಗಿ ನೋಂದಾಯಿತರಾಗಿದ್ದಾರೆ. ಅದರಂತೆ, ಕರಡು ಮತದಾರರ ಪಟ್ಟಿಯಲ್ಲಿಯೂ ಸಹ ಮಾನ್ಯರ ಹೆಸರು ಸೇರ್ಪಡೆಯಾಗಿದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ನಡೆಯುವ ವಿಚಾರಣೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿಯಲ್ಲಿ ಮಾನ್ಯರ ಹೆಸರಿನಲ್ಲಿ ವ್ಯತ್ಯಾಸವಿರುವ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿ (BLO) ಅವರು ಯಾವುದೇ ನೋಟೀಸ್ ಜಾರಿ ಮಾಡದೆ, ಗೌರವಾನ್ವಿತ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಗೆ ಅವರ ಹೆಸರನ್ನು ಸೇರಿಸಲು ಶಿಫಾರಸು ಮಾಡಿದ್ದಾರೆ. ಅದರಂತೆ, ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

voters list gba ನೋಟಿಸ್ cnr rao

voters list gba ನೋಟಿಸ್ cnr rao

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ