Communal Harmony: ಹಿಂದೂ, ಮುಸ್ಲಿಂ, ಕ್ರೈಸ್ತರ ಭಾವೈಕ್ಯದ ಗಣಪ

Communal Harmony: ಹಿಂದೂ, ಮುಸ್ಲಿಂ, ಕ್ರೈಸ್ತರ ಭಾವೈಕ್ಯದ ಗಣಪ

Communal Harmony: ಹಿಂದೂ, ಮುಸ್ಲಿಂ, ಕ್ರೈಸ್ತರ ಭಾವೈಕ್ಯದ ಗಣಪ

ಆಲೂರು: ಕೆ.ಹೊಸಕೋಟೆ ಹೋಬಳಿ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯದವರು ಜೊತೆಗೂಡಿ ಗೌರಿ,ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಒಟ್ಟಾಗಿ ಪೂಜೆ ಸಲ್ಲಿಸುತ್ತಿದ್ದಾರೆ.

ಗ್ರಾಮದಲ್ಲಿ 160 ಕುಟುಂಬಗಳಲ್ಲಿ ನೂರು ಮುಸ್ಲಿಂ ಕುಟುಂಬ ಹಾಗೂ ಕೆಲವು ಕ್ರೈಸ್ತರ ಕುಟುಂಬಗಳಿವೆ. ಗಣೇಶ ಪೂಜೆ ಸಂದರ್ಭದಲ್ಲಿ ಪ್ರತಿದಿನ ಎಲ್ಲರೂ ಸೇರಿ ಅನ್ನ ಸಂತರ್ಪಣೆ ಮಾಡುತ್ತಾರೆ.

45 ವರ್ಷಗಳಿಂದಲೂ ಈ ಗ್ರಾಮದಲ್ಲಿ ಸೌಹಾರ್ದದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಆರಂಭದ ದಿನಗಳಲ್ಲಿ ರಸ್ತೆ ಬದಿಯ ಮನೆಯೊಂದರಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಪೂಜಿಸಲಾಗುತ್ತಿತ್ತು. ಮನೆ ಶಿಥಿಲಗೊಂಡಿದ್ದರಿಂದ ನಾಲ್ಕೈದು ವರ್ಷಗಳಿಂದ ಗ್ರಾಮದ ಗುತ್ತಿಗೆದಾರ ಹಬೀಬ್ ಎಂಬುವವರು ಗಣೇಶೋತ್ಸವಕ್ಕೆ ಜಾಗ ಬಿಟ್ಟು ಕೊಟ್ಟಿದ್ದಾರೆ.

‘ಗ್ರಾಮದಲ್ಲಿ ಎಂದಿಗೂ ಕೋಮುಸೌಹಾರ್ದಕ್ಕೆ ಧಕ್ಕೆಯಾಗಿಲ್ಲ. ಆದರೆ, ಕೆಲ ಸಂದರ್ಭಗಳಲ್ಲಿ ರಾಜಕೀಯದವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಕೋಮು ಗಲಭೆ ಸೃಷ್ಟಿ ಮಾಡುತ್ತಾರೆ. ಇದು ಎಂದಿಗೂ ಸಮಾಜಕ್ಕೆ ಒಳ್ಳೆಯದಲ್ಲ’ ಎನ್ನುತ್ತಾರೆ ರೈತ ಮುಖಂಡ ಜಯಣ್ಣ.

‘ಸಮಾಜದಲ್ಲಿ ಯಾವಾಗಲೂ ಒಟ್ಟಾಗಿ ಬಾಳಿದರೆ ಸ್ವರ್ಗ ಸುಖ ಕಾಣಬಹುದು. ನಮ್ಮ ಗ್ರಾಮದಲ್ಲಿ ಹಿಂದೂ, ಮುಸ್ಲಿಂ ಎಲ್ಲ ಹಬ್ಬಗಳನ್ನು ಒಟ್ಟಾಗಿ ಆಚರಿಸುತ್ತೇವೆ’ ಎಂದು ಗ್ರಾಮದ ರೈತ ಮುಖಂಡ ಸುಲೇಮಾನ್ ಅಭಿಮಾನದಿಂದ ಹೇಳುತ್ತಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ