Copra: ತಿಪಟೂರು ಎಪಿಎಂಸಿಯಲ್ಲಿ ಕೊಬ್ಬರಿ ಧಾರಣೆ

Copra: ತಿಪಟೂರು ಎಪಿಎಂಸಿಯಲ್ಲಿ ಕೊಬ್ಬರಿ ಧಾರಣೆ

Copra: ತಿಪಟೂರು ಎಪಿಎಂಸಿಯಲ್ಲಿ ಕೊಬ್ಬರಿ ಧಾರಣೆ

Copra Price: ಕಲ್ಪತರು ನಾಡು ಅಂತಲೇ ಹೆಸರುವಾಸಿಯಾಗಿರುವ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕೊಬ್ಬರಿಗೆ ದೇಶಾದ್ಯಂತ ಬೇಡಿಕೆ ಇದೆ. ಈಗಾಗಲೇ ಇಲ್ಲಿನ ಎಪಿಎಂಸಿಯಲ್ಲಿ ದಾಖಲೆ ಬೆಲೆಗೆ ಮಾರಾಟ ಆಗಿರುವ ಉದಾಹರಣೆಗಳಿವೆ. ಹಾಗಾದ್ರೆ ಇಲ್ಲಿ ಇದೀಗ ಪ್ರಸ್ತುತ ಕ್ವಿಂಟಾಲ್ ಕೊಬ್ಬರಿ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದ ಪ್ರಮುಖ ತೆಂಗು ಹಾಗೂ ಕೊಬ್ಬರಿ ವರ್ತಕ ಕೇಂದ್ರವಾಗಿರುವ ತುಮಕೂರು ಜಿಲ್ಲೆಯ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಏರಿಕೆ ಹಾದಿಯಲ್ಲಿದ್ದು, ತೆಂಗು ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಇಂದು (ಸೆಪ್ಟೆಂಬರ್ 3, 2026) ತಿಪಟೂರು ಮಾರುಕಟ್ಟೆಯಲ್ಲಿ ಪ್ರತಿ 100 ಕೆಜಿ (ಒಂದು ಕ್ವಿಂಟಾಲ್) ಕೊಬ್ಬರಿ ಬೆಲೆಯು 30,678 ಇದೆ. ಅಂದರೆ 1 ಕೆ.ಜಿ.ಗೆ ₹306.78 ಆಗುತ್ತದೆ.

ತಿಪಟೂರು ಕೊಬ್ಬರಿಗೆ ಭಾರಿ ಬೇಡಿಕೆ

ಇತ್ತೀಚಿನ ದಿನಗಳಲ್ಲಿ ಹೊರರಾಜ್ಯಗಳ ಮಾರುಕಟ್ಟೆಗಳಲ್ಲಿ ಒಣ ಕೊಬ್ಬರಿಗೆ ಬೇಡಿಕೆ ಹೆಚ್ಚಾಗಿದೆ. ತಮಿಳುನಾಡು, ಮಹಾರಾಷ್ಟ್ರ ಮತ್ತು ಉತ್ತರ ಭಾರತದ ಪ್ರಮುಖ ನಗರಗಳಿಂದ ತಿಪಟೂರು ಕೊಬ್ಬರಿಗೆ ಭಾರಿ ಬೇಡಿಕೆ ಬಂದಿರುವುದು ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಅಷ್ಟೇ ಅಲ್ಲದೆ, ಹಬ್ಬಗಳು ಸಾಲಾಗಿ ಬರುತ್ತಿರುವುದರಿಂದ ಮಾರುಕಟ್ಟೆಗೆ ಕೊಬ್ಬರಿ ಬರುವುದು ಕಡಿಮೆಯಾಗಿ, ದರ ಸ್ಥಿರತೆ ಕಾಯ್ದುಕೊಂಡಿದೆ. ಇಳಿಕೆಯಾದ್ರೆ ಸ್ಪಲ್ಪ ಪ್ರಮಾಣದಲ್ಲಿ ಆಗುತ್ತದೆ ಬಿಟ್ಟರೆ, ಕ್ವಿಂಟಾಲ್‌ ಧಾರಣೆ ತುಂಬಾ ದಿನಗಳಿಂದ 30,000 ರೂಪಾಯಿಯ ಆಸುಪಾಸಿನಲ್ಲೇ ಇದೆ.

ಕಳೆದ ಕೆಲವು ದಿನಗಳಿಂದ ಕೊಬ್ಬರಿ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದೆ. ಇದೀಗ ಪ್ರತಿ ಕ್ವಿಂಟಾಲ್‌ಗೆ ₹30,678 ಇರುವುದು ತೆಂಗು ಬೆಳೆಗಾರರಿಗೆ ಸಂತಸದ ವಿಚಾರವಾಗಿದೆ. ಮಾಹಿತಿ ಪ್ರಕಾರ, ಮುಂಬರುವ ದಿನಗಳಲ್ಲಿ ಕೊಬ್ಬರಿಗೆ ಉತ್ತಮ ಬೆಲೆ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ರೈತರು ತಮ್ಮ ಉತ್ಪನ್ನಗಳನ್ನು ಗುಣಮಟ್ಟದ ಆಧಾರದ ಮೇಲೆ ವರ್ಗೀಕರಣ ಮಾಡಿ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಮತ್ತಷ್ಟು ಉತ್ತಮ ಧಾರಣೆ ಪಡೆಯಬಹುದು ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ತಿಪಟೂರು ಕೊಬ್ಬರಿಯ ವಿಶೇಷತೆ

ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಹಬ್ಬ-ಹರಿದಿನಗಳು ಹತ್ತಿರ ಆಗುತ್ತಿರುವುದರಿಂದ ಕೊಬ್ಬರಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ತಿಪಟೂರು ಕೊಬ್ಬರಿ ತನ್ನ ವಿಶಿಷ್ಟ ರುಚಿ, ಹೆಚ್ಚಿನ ಎಣ್ಣೆಯಂಶಕ್ಕೆ ಹೆಸರುವಾಸಿಯಾಗಿದೆ. ಇದರಿಂದಾಗಿ ಕಲ್ಪತರು ನಾಡಿನ ಕೊಬ್ಬರಿಗೆ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂದು ಹೇಳಬಹುದು.

ಇತ್ತೀಚಿನ ಹವಾಮಾನ ವೈಪರೀತ್ಯ ಹಾಗೂ ಇಳುವರಿಯಲ್ಲಿ ಆದ ವ್ಯತ್ಯಾಸದಿಂದ ಮಾರುಕಟ್ಟೆಗೆ ಬರುವ ಕೊಬ್ಬರಿಯ ಪ್ರಮಾಣ ಕಡಿಮೆಯಾಗಿದ್ದು, ಆಗಾಗ ಏರಿಳಿತ ಆಗುತ್ತಲಿರುತ್ತದೆ. ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯಾಗುವ ಭರವಸೆಯಲ್ಲಿ ತೆಂಗು ಬೆಳೆಗಾರರಿದ್ದಾರೆ. ಮತ್ತೊಂದೆಡೆ ಹೇಳುವುದಾದರೆ ಮಧ್ಯವರ್ತಿಗಳ ಹಾವಳಿ ಇಲ್ಲದೆ, ಇಲ್ಲಿನ ಮಾರುಕಟ್ಟೆಯಲ್ಲಿ ರೈತರಿಗೆ ಸೂಕ್ತ ಬೆಲೆ ಸಿಗುತ್ತಿದೆ. ಇದರಿಂದ ಕೊಬ್ಬರಿ ಬೆಳೆಗಾರರಲ್ಲಿ ವಿಶ್ವಾಸವನ್ನು ಹೆಚ್ಚಿದೆ.

ತಿಪಟೂರು ಕೊಬ್ಬರಿಗೆ ಭಾರಿ ಬೇಡಿಕೆ ಯಾಕೆ?

* ಸ್ಥಳೀಯ ಮಾರುಕಟ್ಟೆಗಳ ಜೊತೆಗೆ ಹೊರರಾಜ್ಯಗಳಲ್ಲಿಯೂ (ವಿಶೇಷವಾಗಿ ಉತ್ತರ ಭಾರತದಲ್ಲಿ) ತಿಪಟೂರು ಉಂಡೆ ಕೊಬ್ಬರಿಗೆ ಭಾರಿ ಬೇಡಿಕೆ ಇದೆ.

* ಹಬ್ಬಗಳು ಮತ್ತು ಶುಭ ಸಮಾರಂಭಗಳ ವೇಳೆ ಬೇಡಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

* ರೈತರು ಮತ್ತು ವ್ಯಾಪಾರಸ್ಥರ ಬಳಿ ಇದ್ದ ಹಳೆಯ ಕೊಬ್ಬರಿಯ ದಾಸ್ತಾನುಗಳು ಬಹುತೇಕ ಖಾಲಿಯಾಗಿವೆ.

* ಹೊಸ ಕೊಬ್ಬರಿ ಮಾರುಕಟ್ಟೆಗೆ ಬರಲು ಸಮಯ ಹಿಡಿಯುತ್ತಿದೆ.

* ತಿಪಟೂರು ಕೊಬ್ಬರಿ ತನ್ನ ವಿಶೇಷ ರುಚಿ ಮತ್ತು ಬಾಳಿಕೆಗೆ ಹೆಸರುವಾಸಿ.

* ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ 'ಗ್ರೇಡ್-1' ಕೊಬ್ಬರಿಯ ಕೊರತೆ ಇರುವುದರಿಂದ, ಸಿಗುತ್ತಿರುವ ಗುಣಮಟ್ಟದ ಈ ಕೊಬ್ಬರಿಗೆ ವ್ಯಾಪಾರಸ್ಥರು ಪೈಪೋಟಿಯ ಮೇಲೆ ಹೆಚ್ಚಿನ ದರ ನೀಡಿ ಖರೀದಿಸುತ್ತಿದ್ದಾರೆ.

* ತೆಂಗಿನ ಎಣ್ಣೆ ಮತ್ತು ಇತರ ಉಪ ಉತ್ಪನ್ನಗಳಿಗೆ ಜಾಗತಿಕವಾಗಿ ಬೇಡಿಕೆ ಹೆಚ್ಚುತ್ತಿದೆ.

ಒಟ್ಟಿನಲ್ಲಿ ಹೇಳುವುದಾದರೆ ತಿಪಟೂರು ಎಪಿಎಂಸಿಯಲ್ಲಿ ಕ್ವಿಂಟಾಲ್ ಕೊಬ್ಬರಿ ಧಾರಣೆ 30,000 ರೂಪಾಯಿ ಆಸುಪಾಸಿನಲ್ಲಿರುವುದು ತೆಂಗು ಬೆಳೆಗಾರರಿಗೆ ಸಂತಸ ಮೂಡಿದಂತಾಗಿದೆ. ಇನ್ನೂ ಹಬ್ಬಗಳು ಬಾಕಿ ಇದ್ದು, ಮುಂಬರುವ ದಿನಗಳಲ್ಲಿ ಮತ್ತೆ ದರ ಏರಿಕೆಯಾಗುವ ಭರವಸೆಯಲ್ಲಿ ರೈತರಿದ್ದಾರೆ.

coconut price hike business news

coconut price hike business news

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ