IAS Posting: ಐಎಎಸ್‌ ಅಧಿಕಾರಿಗಳ ವರ್ಗ, ತ್ರಿಲೋಕಚಂದ್ರ ಕೃಷಿ ಇಲಾಖೆ ಕಾರ್ಯದರ್ಶಿ

IAS Posting: ಐಎಎಸ್‌ ಅಧಿಕಾರಿಗಳ ವರ್ಗ, ತ್ರಿಲೋಕಚಂದ್ರ ಕೃಷಿ ಇಲಾಖೆ ಕಾರ್ಯದರ್ಶಿ

IAS Posting: ಐಎಎಸ್‌ ಅಧಿಕಾರಿಗಳ ವರ್ಗ, ತ್ರಿಲೋಕಚಂದ್ರ ಕೃಷಿ ಇಲಾಖೆ ಕಾರ್ಯದರ್ಶಿ

ಬೆಂಗಳೂರು: ಕರ್ನಾಟಕ ಸರ್ಕಾರವು ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಾ.ಕೆ.ವಿ.ತ್ರಿಲೋಕಚಂದ್ರ ಅವರನ್ನು ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಕ್ಯಾಪ್ಟನ್‌ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದ್ದು ಯಾವುದೇ ಹುದ್ದೆ ತೋರಿಸಿಲ್ಲ.

ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಡಾ.ಕೆ.ರಾಕೇಶ್‌ ಕುಮಾರ್ ಅವರನ್ನು ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದಲ್ಲದೇ ಸರ್ವೆ ಸೆಟ್ಲ್‌ಮೆಂಟ್ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರ ಹೆಚ್ಚುವರಿ ಹುದ್ದೆಯನ್ನು ರಾಕೇಶ್‌ ಕುಮಾರ್ ಅವರಿಗೆ ನೀಡಲಾಗಿದೆ. ಈ ಹುದ್ದೆಯಲ್ಲಿದ್ದ ಕೆ.ವೆಂಕಟರಾಜಾ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತರಾಗಿದ್ದ ಡಾ.ಅರುಂಧತಿ ಚಂದ್ರಶೇಖರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಖಜಾನೆ ಇಲಾಖೆ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿ ರಘುನಂದನಮೂರ್ತಿ ಹೆಚ್ಚುವರಿ ಕಾರ್ಯಭಾರದಲ್ಲಿದ್ದರು.

ಸಣ್ಣ ಅತಿ ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಇಲಾಖೆ( MSME) ಇಲಾಖೆ ನಿರ್ದೇಶಕರಾಗಿದ್ದ ವೈ.ಎಸ್. ಪಾಟೀಲ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಅವರನ್ನು ಗ್ರಾಮೀಣಭಿವೃದ್ದಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಇದಲ್ಲದೇ ಪಾಟೀಲ ಅವರಿಗೆ ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತರು ಹಾಗೂ ಕರ್ನಾಟಕ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆ ಹೆಚ್ಚುವರಿ ಕಾರ್ಯಭಾರ ನೀಡಲಾಗಿದೆ.

ಹುಬ್ಬಳ್ಳಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ಎಲ್‌.ವೈಶಾಲಿ ಅವರನ್ನು ಮೈಸೂರು ಸೇಲ್ಸ್‌ ಇಂಟರನ್ಯಾಷನಲ್‌ ಲಿಮಿಟೆಡ್‌( msil) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯ ಹೆಚ್ಚುವರಿ ಕಾರ್ಯಭಾರ ಹೊಂದಿದ್ದ ಲವಿಷ್‌ ಒರ್ಡಿಯಾ ಅವರನ್ನು ಈ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪೆನಿ ವ್ಯವಸ್ಥಾಪಕ ನಿರ್ದೇಶಕರಾಗಿರುವ ಶಶಿಧರ ಕುರೇರಾ ಅವರನ್ನು ಹಟ್ಟಿ ಚಿನ್ನದ ಗಣಿ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಕಾರ್ಯಭಾರ ವಹಿಸಲಾಗಿದೆ. ಕಂಪೆನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಆರ್.ಶಿಲ್ಪಾ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

ಕೊಡಗು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಆನಂದ ಪ್ರಕಾಶ ಮೀನಾ ಅವರನ್ನು ವಿಜಯಪುರ ಜಿಲ್ಲಾಪಂಚಾಯಿತಿ ಸಿಇಒ ಆಗಿ ನೇಮಕ ಮಾಡಲಾಗಿದೆ.

ವಿಜಯಪುರ ಜಿಲ್ಲಾಪಂಚಾಯಿತಿ ಸಿಇಒ ಆಗಿದ್ದ ರಿಷಿ ಆನಂದ್ ಅವರನ್ನು ಶಿವಮೊಗ್ಗ ಜಿಲ್ಲಾಪಂಚಾಯಿತಿ ಸಿಇಒ ಆಗಿ ನೇಮಕ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾಪಂಚಾಯಿತಿ ಸಿಇಒ ಆಗಿದ್ದ ಎನ್‌.ಹೇಮಂತ್‌ ಅವರನ್ನು ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಕೊಳ್ಳೇಗಾಲ ಉಪವಿಭಾಗಾಧಿಕಾರಿಯಾಗಿದ್ದ ದಿನೇಶ್ ಕುಮಾರ್ ಮೀನಾ ಅವರನ್ನು ಕೊಡಗು ಜಿಲ್ಲಾಪಂಚಾಯಿತಿ ಸಿಇಒ ಆಗಿ ನೇಮಕ ಮಾಡಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ