Karnataka Rains: ಉತ್ತರ ಕನ್ನಡ ಜಿಲ್ಲೆ ಹೆಚ್ಚು ಕಡೆ ಮಳೆ, ಯಾವ ಭಾಗದಲ್ಲಿ ಎಷ್ಟು

Karnataka Rains: ಉತ್ತರ ಕನ್ನಡ ಜಿಲ್ಲೆ ಹೆಚ್ಚು ಕಡೆ ಮಳೆ, ಯಾವ ಭಾಗದಲ್ಲಿ ಎಷ್ಟು

Karnataka Rains: ಉತ್ತರ ಕನ್ನಡ ಜಿಲ್ಲೆ ಹೆಚ್ಚು ಕಡೆ ಮಳೆ, ಯಾವ ಭಾಗದಲ್ಲಿ ಎಷ್ಟು

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ವಾನಳ್ಳಿಯಲ್ಲಿ ಅತ್ಯಧಿಕ 34 ಮಿ.ಮೀ ಮಳೆಯಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ,ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲ್ಲೂಕಿನ ಗುಡಿಸಾಗರದಲ್ಲಿ 33.75 ಮಿ.ಮೀ, ಹೊನ್ನಾವರ ತಾಲ್ಲೂಕಿನ ಮಂಕಿಯಲ್ಲಿ 32.25 ಮಿ.ಮೀ, ಇಡುಗುಂಜಿಯಲ್ಲಿ 31.5 ಮಿ.ಮೀ, ಕೆಳಗಿನೂರಿನಲ್ಲಿ 30 ಮಿಲಮೀ, ಬಾಲ್ಕೂರಿನಲ್ಲಿ 29 ಮಿ.ಮೀ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ದೇವಾಚಲದಲ್ಲಿ 28 ಮಿ.ಮೀ, ವಿಜಯಪುರ ಜಿಲ್ಲೆ ಜುಮನಾಳ, ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಹಾಗೂ ಹೊನ್ನಾವರ ತಾಲ್ಲೂಕಿನ ಕಾಸರಕೋಡದಲ್ಲಿ 27.5 ಮಿ.ಮೀ ಮಳೆಯಾಗಿದೆ.

ಭಟ್ಕಳ ತಾಲ್ಲೂಕಿನ ಹೆಬ್ಲೆ, ಬೈಲೂರಿನಲ್ಲಿ 26.5 ಮಿ.ಮೀ, ಮಾವಳ್ಳಿಯಲ್ಲಿ 26 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅಮಟಡಿಯಲ್ಲಿ 24.5 ಮಿ.ಮೀ, ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಅರಟಗಲ್‌ನಲ್ಲಿ 24 ಮಿ.ಮೀ, ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಬೆಳವಟಗಿಯಲ್ಲಿ 24 ಮಿ.ಮೀ ಮಳೆಯಾಗಿದೆ.

ಹೊನ್ನಾವರ ತಾಲ್ಲೂಕಿನ ಜಾವಳ್ಳಿಯಲ್ಲಿ 22.5 ಮಿ.ಮೀ, ಖಾರವಾ ಹಾಗೂ ಬಡನಿಡಿಯೂರಿನಲ್ಲಿ 21.5 ಮಿ.ಮೀ, ಭಟ್ಕಳದಲ್ಲಿ 20.25 ಮಿ.ಮೀ, ಬೆಳಗಾವಿ ಜಿಲ್ಲೆ ಮುಡಗಳ್ಳಿ ವಡೇರಹಟ್ಟಿ, ಭಟ್ಕಳ ತಾಲ್ಲೂಕಿನ ಕಾಯ್ಕಣಿ, ಹುಕ್ಕೇರಿ ತಾಲ್ಲೂಕಿನ ಮತ್ತಿವಾಡೆಯಲ್ಲಿ ತಲಾ 20 ಮಿ.ಮೀ ಮಳೆಯಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ