Karnataka Rains: ಕೋಲಾರ, ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಮಳೆ; ಎಲ್ಲಿ ಎಷ್ಟು

Karnataka Rains: ಕೋಲಾರ, ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಮಳೆ; ಎಲ್ಲಿ ಎಷ್ಟು

Karnataka Rains: ಕೋಲಾರ, ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಮಳೆ; ಎಲ್ಲಿ ಎಷ್ಟು

ಬೆಂಗಳೂರು: ಗಣಪತಿ ಹಬ್ಬದ ದಿನದಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಅದರಲ್ಲೂ ಕಳೆದ ಮೂರೂವರೆ ತಿಂಗಳಿನಿಂದ ಮಳೆ ಕೊರತೆ ಎದುರಿಸುತ್ತಿದ್ದ ಕೋಲಾರ, ಚಾಮರಾಜನಗರ ಸಹಿತ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಕಳೆದ 24 ಗಂಟೆ ಮಳೆ ಮಾಹಿತಿ ಪ್ರಕಾರ, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಬಲ್ಲಾ ಗ್ರಾಮದಲ್ಲಿ ಅತ್ಯಧಿಕ 74.5 ಮಿ.ಮೀ ಮಳೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ 71 ಮಿ.ಮೀ, ಚಾಮರಾಜನಗರ ತಾಲ್ಲೂಕಿನ ಕೂಡ್ಲೂರಿನಲ್ಲಿ 65 ಮಿ.ಮೀ, ಬೆಂಗಳೂರು ನಗರ ಜಿಲ್ಲೆ ಆನೆಕಲ್ ತಾಲ್ಲೂಕಿನ ಮುಗಳೂರಿನಲ್ಲಿ 56.5 ಮಿ.ಮೀ ಮಳೆಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ದೊಡ್ಡಗಂಜೂರಿನಲ್ಲಿ 52 ಮಿ.ಮೀ, ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲ್ಲೂಕಿನ ಹುಣಸನಹಳ್ಳಿಯಲ್ಲಿ 49. 5 ಮಿ.ಮೀ, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕ್ಯಾತಘಟ್ಟದಲ್ಲಿ 45 ಮಿ.ಮೀ ಮಳೆಯಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿರಡೋಣಿಯಲ್ಲಿ 27 ಮಿ.ಮೀ, ಶಿವಮೊಗ್ಗ ತಾಲ್ಲೂಕಿನ ಹರಮಘಟ್ಟದಲ್ಲಿ 16 ಮಿ.ಮೀ, ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಬಿ.ಶೆಟ್ಟಿಹಳ್ಳಿಯಲ್ಲಿ 14.5 ಮಿ.ಮೀ, ಮಳೆಯಾಗಿದೆ,

ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಮಂಡಲಗೇರಿ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಕೆರವಾಡಿಯಲ್ಲಿ ತಲಾ 8 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅಮಟಾಡಿ, ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಯಳವಾರದಲ್ಲಿ ತಲಾ 6 ಮಿ.ಮೀ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲ್ಲೂಕಿನ ಭಾಗಾವತಿಯಲ್ಲಿ 5.5 ಮಿ.ಮೀ, ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಗೋನ್ನಾಗರದಲ್ಲಿ 4.5 ಮಿ.ಮೀ, ರಾಯಚೂರು ತಾಲ್ಲೂಕಿನ ಯಾಪಲದಿನ್ನಿಯಲ್ಲಿ 4 ಮಿ.ಮೀ ಹಾಗೂ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಅನವಾಲದಲ್ಲಿ 3 ಮಿ.ಮೀ ಮಳೆಯಾಗಿದೆ.

ಯಾದಗಿರಿಯಲ್ಲಿ 2 ಮಿ.ಮೀ, ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಮಾಚೇನಹಳ್ಳಿ ಹಾಗೂ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಹಡಲಸಂಗ್‌ ನಲ್ಲಿ ತಲಾ 1 ಮಿ.ಮೀ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಣಕಲ್‌, ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಕೋಟೆ, ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿ, ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲ್ಲೂಕು ಸಾಣಾಪುರಯಲ್ಲಿ 0.5 ಮಿ.ಮೀ, ಧಾರವಾಡ ಜಿಲ್ಲೆ ಕಲಘಟಗಿ, ವಿಜಯನಗರ ಜಿಲ್ಲೆ ಹಡಗಲಿ ತಾಲ್ಲೂಕಿನ ಕೊಂಬಳಿಯಲ್ಲಿ ತಲಾ 0.2 ಮಿ.ಮೀ ಮಳೆಯಾಗಿದೆ.

ಕೊಡಗು, ಚಿತ್ರದುರ್ಗ, ಹಾಸನ ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆಯಾಗಿಲ್ಲ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ