KPSC ಅಕ್ರಮ: ಪ್ರೇಯಸಿಗೆ ₹26 ಲಕ್ಷದ ಚಿನ್ನದ ಉಡುಗೊರೆ ನೀಡಿದ್ದ ಐಎಎಸ್ ಅಧಿಕಾರಿ

KPSC ಅಕ್ರಮ: ಪ್ರೇಯಸಿಗೆ ₹26 ಲಕ್ಷದ ಚಿನ್ನದ ಉಡುಗೊರೆ ನೀಡಿದ್ದ ಐಎಎಸ್ ಅಧಿಕಾರಿ

KPSC ಅಕ್ರಮ: ಪ್ರೇಯಸಿಗೆ ₹26 ಲಕ್ಷದ ಚಿನ್ನದ ಉಡುಗೊರೆ ನೀಡಿದ್ದ ಐಎಎಸ್ ಅಧಿಕಾರಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಕ್ರಮ ಪ್ರಕರಣದ ಆರೋಪಿಗಳಾದ ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್ ಗಂಗ್ವಾರ್‌ ಹಾಗೂ ಮಧ್ಯವರ್ತಿ ಬಸವರಾಜ್‌ ಕನ್ನಾಳೆ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್ ಅನುಮತಿ ನೀಡಿದೆ.

ಆಗಸ್ಟ್‌ 30ರಂದು ಆರೋಪಿಗಳನ್ನು ಬಂಧಿಸಿದ್ದ ಸಿಐಡಿ ತನಿಖಾಧಿಕಾರಿಗಳು,ಹತ್ತು ದಿನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಸಿಐಡಿ ಕಸ್ಟಡಿ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಬ್ಬರನ್ನೂ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಬೇಕಾಗಿದೆ. ಹೀಗಾಗಿ ವಶಕ್ಕೆ ನೀಡುವಂತೆ ಇ.ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ಮಾನ್ಯ ಮಾಡಿರುವ ಕೋರ್ಟ್, ಪರಪ್ಪನ ಅಗ್ರಹಾರ ಜೈಲಿನಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದು ಹೇಳಿಕೆ ದಾಖಲಿಸಿಕೊಳ್ಳಲು ಅನುಮತಿ ನೀಡಿದೆ. ಶುಕ್ರವಾರ ಅಥವಾ ಶನಿವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೈಲಿಗೆ ತೆರಳಿ ಆರೋಪಿಗಳಿಂದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಪರೀಕ್ಷಾ ನಿಯಂತ್ರಕರಾಗಿದ್ದ ಗಂಗ್ವಾರ್, ಕನ್ನಾಳೆ ಜತೆ ಸೇರಿ ಪ್ರಶ್ನೆಪತ್ರಿಕೆಮಾರಾಟದ ಮೂಲಕ ಲಕ್ಷಾಂತರ ರೂಪಾಯಿ ಪಡೆದುಕೊಂಡಿದ್ದಾರೆ. ಆ ಹಣದಲ್ಲಿ ತನ್ನ ಹುಟ್ಟೂರಿನಲ್ಲಿ ಆಸ್ತಿ ಖರೀದಿಸಿದ್ದಾರೆ. ಜತೆಗೆ ದೆಹಲಿಯಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇಯಸಿಗೆ ₹26 ಲಕ್ಷದ ಚಿನ್ನಾಭರಣವನ್ನು ಉಡುಗೊರೆಯಾಗಿ ನೀಡಿದ್ದಾರೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಕೆಪಿಎಸ್‌ಸಿ ಅಕ್ರಮದಿಂದ ಬಂದ ಹಣದಲ್ಲಿ ಬೇನಾಮಿ ಖಾತೆಯೊಂದಕ್ಕೆ ಅಂದಾಜು ₹38 ಲಕ್ಷ ವರ್ಗಾಯಿಸಿಕೊಂಡಿದ್ದಾರೆ. ಆ ಖಾತೆಯಿಂದಲೇ ಬೆಂಗಳೂರು ಮತ್ತು ದೆಹಲಿಯ ಆಭರಣ ಅಂಗಡಿಯಿಂದ ಚಿನ್ನಾಭರಣ ಖರೀದಿಸಿರುವ ಕುರಿತು ಪ್ರಶ್ನಿಸಿದಾಗ ಆರೋಪಿ ನಿರಾಕರಿಸಿದ್ದರು. ಯಾವುದೇಚಿನ್ನಾಭರಣ ಖರೀದಿಸಿಲ್ಲ ಎಂದು ವಾದಿಸಿದ್ದರು. ಆದರೆ, ಸಿಐಡಿ ಅಧಿಕಾರಿ ಗಳು ಚಿನ್ನಾಭರಣ ಖರೀದಿಸಿರುವ ರಸೀದಿ ಹಾಗೂ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿಯನ್ನು ತೋರಿಸಿ ಪ್ರಶ್ನಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಸಂಪರ್ಕಕ್ಕೆ ಸಿಗದ ಸಾಹುಕಾರ

ಆಯೋಗದ ಹಿಂದಿನ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ತಲೆಮರೆಸಿಕೊಂಡಿದ್ದು,ಸಿಐಡಿಯ ವಿಶೇಷ ತಂಡಗಳು ಹೊರ ರಾಜ್ಯದಲ್ಲಿ ಹುಡುಕಾಟ ನಡೆಸುತ್ತಿವೆ. ಬೆಂಗಳೂರು, ಕಲಬುರಗಿ ಸೇರಿ ಹೊರ ರಾಜ್ಯಗಳಲ್ಲಿ ಶೋಧ ನಡೆಸಿದ್ದಾರೆ. ಸೆಪ್ಟೆಂಬರ್‌ 7ರಂದು ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್‌ ವಜಾಗೊಳಿಸಿದ್ದು, ಅಂದಿನಿಂದ ಸಾಹುಕಾರ ಮೊಬೈಲ್ ಸ್ವಿಚ್‌ ಆಫ್ ಮಾಡಿಕೊಂಡು ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ