KPSC ಮುಚ್ಚುವೆ: ಸಿಎಂ ಹೇಳಿಕೆ ಬುದ್ಧಿಗೇಡಿತನ, ಅಜ್ಞಾನ; ಸಚಿವ ಕುಮಾರಸ್ವಾಮಿ

KPSC ಮುಚ್ಚುವೆ: ಸಿಎಂ ಹೇಳಿಕೆ ಬುದ್ಧಿಗೇಡಿತನ, ಅಜ್ಞಾನ; ಸಚಿವ ಕುಮಾರಸ್ವಾಮಿ

KPSC ಮುಚ್ಚುವೆ: ಸಿಎಂ ಹೇಳಿಕೆ ಬುದ್ಧಿಗೇಡಿತನ, ಅಜ್ಞಾನ; ಸಚಿವ ಕುಮಾರಸ್ವಾಮಿ

ನವದೆಹಲಿ; ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕರ್ನಾಟಕ ಲೋಕಸೇವಾ ಆಯೋಗವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ ವರಸೆ ಹೇಗಿದೆ ಎಂದರೆ 'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ!'; 'ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ!!' ಎಂದು ಲೇವಡಿ ಮಾಡಿದ್ದಾರೆ.

ಕೆಪಿಎಸ್ಸಿ ಸಂಸ್ಥೆ ಚೆನ್ನಾಗಿಯೇ ಇದೆ, ಕೆಟ್ಟ ಜನ ಬಂದು ಕೂತಿದ್ದಾರಷ್ಟೇ. ಬೇಲಿಯೇ ಹೊಲ ಮೇಯುತ್ತಿದೆ. ಅಲ್ಲಿಗೆ ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ವಿಧಾನಸೌಧದ 3ನೇ ಮಹಡಿಯಲ್ಲಿ ಕೂತವರೇ ಎಸಗಿದ ಪಾಪವಲ್ಲವೇ ಇದು? ಆ ಲೆಕ್ಕಕ್ಕೆ ಬಂದರೆ ವಿಧಾನಸೌಧವನ್ನೇ ಮುಚ್ಚಬೇಕು. ನಿಮ್ಮ ಸಾರಥ್ಯದಲ್ಲಿ ಅದೂ ನಡೆದುಹೋಗಲಿ ಎಂದು ಮುಖ್ಯಮಂತ್ರಿಗೆ ಕೇಂದ್ರ ಸಚಿವರು ಟಾಂಗ್ ನೀಡಿದ್ದಾರೆ.

ಬೇಜವಾಬ್ದಾರಿಯಿಂದ ಚಪಲಕ್ಕೆ ನಾಲಿಗೆ ಜಾರುವ ಮೊದಲು ಕೆಪಿಎಸ್ಸಿ ಎಂದರೆ ಏನು? ಅದರ ಸಂರಚನೆ, ಸ್ವರೂಪ ಹೇಗಿರುತ್ತದೆ? ಸಾಂವಿಧಾನಿಕವಾಗಿ ಅದಕ್ಕಿರುವ ರಕ್ಷಣೆ ಏನು? ಆ ಸಂಸ್ಥೆ ನಡೆದುಬಂದ ಹಾದಿ, ಹೆಗ್ಗಳಿಕೆ ಬಗ್ಗೆ ತಿಳಿದುಕೊಳ್ಳಿ. ಹೊಲಕ್ಕೆ ಕಳೆ ಬಿದ್ದರೆ ಅದನ್ನು ಕಿತ್ತೆಸೆಯಬೇಕು, ಹೊಲಕ್ಕೇ ವಿಷವುಣಿಸುವ ಕೆಲಸ ಆಗಬಾರದು ಎಂದು ಕಿವಿಮಾತು ಹೇಳಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ