
N.Shashikumar Transfer: ಹುಬ್ಬಳ್ಳಿ-ಧಾರವಾಡ ಖಡಕ್ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ದಿಢೀರ್ ವರ್ಗಾವಣೆ
N.Shashikumar: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸುತ್ತಲಿರುತ್ತದೆ. ಹಾಗೆಯೇ ಇದೀಗ ಹುಬ್ಬಳ್ಳಿ-ಧಾರವಾಡ ಖಡಕ್ ಪೊಲೀಸ್ ಕಮಿಷನರ್ ಆಗಿದ್ದ ಎನ್.ಶಶಿಕುಮಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಇವರ ಜಾಗಕ್ಕೆ ಯಾರನ್ನ ನೇಮಕ ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಅವರಿಗೆ ಯಾವುದೇ ಹೊಸ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಬೋರ್ಸೆ ಭೂಷಣ್
2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಬೋರ್ಸೆ ಭೂಷಣ್ ಗುಲಾಬರಾವ್ ಅವರನ್ನು ಹುಬ್ಬಳ್ಳಿ-ಧಾರವಾಡದ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇವರು ಈ ಮುದಲು ಬೆಳಗಾವಿ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಎನ್.ಶಶಿಕುಮಾರ್ ಹುಬ್ಬಳ್ಳಿ-ಧಾರವಾಡಕ್ಕೆ ಬಂದಿದ್ದು ಯಾವಾಗ?
ಇನ್ನು ವರ್ಗಾವಣೆಗೊಂಡ ಎನ್.ಶಶಿಕುಮಾರ್ ಅವರು 2024ರ ಜುಲೈನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಈ ವರ್ಗಾವಣೆಯೊಂದಿಗೆ ನಗರದ ಪೊಲೀಸ್ ಕಮಿಷನರ್ ಆಗಿ ಅವರ ಎರಡು ವರ್ಷಗಳ ಅವಧಿ ಮುಕ್ತಾಯಗೊಂಡಂತಾಗಿದೆ. ಅವರ ಹೊಸ ಹುದ್ದೆಯ ನಿಯೋಜನೆಯ ಕುರಿತ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.