OTTಯಲ್ಲಿ ಹೆಚ್ಚಿನ ಮೊತ್ತ ಪಡೆಯಲು ಟಾಕ್ಸಿಕ್ ಕಸರತ್ತು: ₹30 ಕೋಟಿಗೆ ಕುಸಿದ ಆಫರ್

OTTಯಲ್ಲಿ ಹೆಚ್ಚಿನ ಮೊತ್ತ ಪಡೆಯಲು ಟಾಕ್ಸಿಕ್ ಕಸರತ್ತು: ₹30 ಕೋಟಿಗೆ ಕುಸಿದ ಆಫರ್

OTTಯಲ್ಲಿ ಹೆಚ್ಚಿನ ಮೊತ್ತ ಪಡೆಯಲು ಟಾಕ್ಸಿಕ್ ಕಸರತ್ತು: ₹30 ಕೋಟಿಗೆ ಕುಸಿದ ಆಫರ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಿತ್ತು. ಟಾಕ್ಸಿಕ್ ಸಿನಿಮಾ ನೋಡಿದ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೇ ಬಾಕ್ಸ್ ಆಫೀಸ್‌ನಲ್ಲಿ ಟಾಕ್ಸಿಕ್ ಸಿನಿಮಾ ಹಿನ್ನಡೆ ಅನುಭವಿಸಿದೆ. ಹೀಗಾಗಿ ನಿರ್ಮಾಪಕರಿಗೆ ಸುಮಾರು ₹300 ಕೋಟಿ ನಷ್ಟವಾಗುವ ಭೀತಿ ಎದುರಾಗಿದೆ ಎಂದು ‘ಬಾಲಿವುಡ್ ಹಂಗಾಮಾ’ ವರದಿ ಮಾಡಿದೆ.

ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಟಾಕ್ಸಿಕ್ ಸಿನಿಮಾ, ಗಳಿಕೆಯಲ್ಲಿ ತೀವ್ರವಾಗಿ ಕುಸಿತ ಕಂಡಿದೆ. ಅಲ್ಲದೇ ಸಿನಿಮಾ ಒಟಿಟಿಗೆ ಮಾರಾಟವಾಗದಿರುವುದು ನಿರ್ಮಾಪಕರ ನಿದ್ದೆಗೆಡಿಸಿದೆ.

ಇನ್ನು, ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನ ಪ್ರಮುಖ ಒಟಿಟಿ ಸಂಸ್ಥೆಯೊಂದು ₹150 ಕೋಟಿ ಆಫರ್‌ ನೀಡಿತ್ತು. ಆದರೆ ಚಿತ್ರಮಂದಿರಗಳಲ್ಲಿ ಟಾಕ್ಸಿಕ್‌ಗೆ ದೊಡ್ಡ ಮಟ್ಟದ ಯಶಸ್ಸು ಸಿಗಲಿದೆ ಎಂಬ ಭರವಸೆಯಲ್ಲಿದ್ದ ಯಶ್ ಹಾಗೂ ಚಿತ್ರತಂಡವು ₹200 ಕೋಟಿಗೂ ಹೆಚ್ಚಿನ ಬೇಡಿಕೆ ಇಟ್ಟಿತ್ತು. ಆದರೆ ಬಾಕ್ಸ್‌ ಆಫೀಸ್‌ನಲ್ಲಿ ಸಿನಿಮಾ ಹಿನ್ನಡೆ ಅನುಭವಿಸಿದ ಬಳಿಕ, ಒಟಿಟಿ ಸಂಸ್ಥೆಗಳು ಎಲ್ಲಾ ಭಾಷೆಗಳ ಡಿಜಿಟಲ್ ಹಕ್ಕುಗಳಿಗೆ ಕೇವಲ ₹30 ಕೋಟಿ ನೀಡಲು ಮುಂದಾಗಿವೆ.

ಇನ್ನು, ಸಿನಿಮಾ ಎ ಪ್ರಮಾಣಪತ್ರ ಹೊಂದಿರುವುದರಿಂದ ಸ್ಯಾಟಲೈಟ್ ಹಕ್ಕುಗಳಿಂದಲೂ ಹೆಚ್ಚಿನ ಆದಾಯ ನಿರೀಕ್ಷಿಸುವಂತಿಲ್ಲ. ಹೀಗಾಗಿ ನಷ್ಟದ ಪ್ರಮಾಣ ಕಡಿಮೆ ಮಾಡಲು ಒಟಿಟಿಗಾಗಿ ಸಿನಿಮಾವನ್ನು ಸಂಪೂರ್ಣವಾಗಿ ಹೊಸದಾಗಿ ಎಡಿಟ್ ಮಾಡಲು ನಿರ್ಮಾಪಕರು ಚಿಂತಿಸುತ್ತಿದ್ದಾರೆ.

ಆಗಸ್ಟ್ 26ರಂದು ಬಿಡುಗಡೆಯಾದ ಟಾಕ್ಸಿಕ್ ಇಲ್ಲಿಯವರೆಗೆ ವಿಶ್ವದಾದ್ಯಂತ ಕೇವಲ ಒಟ್ಟು ₹337 ಕೋಟಿ ಗಳಿಸಿದೆ. ಈ ಸಿನಿಮಾದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ